ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತವಾಗಿದೆ. ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ಅಪಘಾತ ಸಂಭವಿಸಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಇವರ ಕಾರು ಅಂಬಡಗಟ್ಟಿ ಬಳಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್ ಆಸ್ಪತ್ರೆಗೆ ದೌಡಾಯಿಸಿದರು. ರವೀಂದ್ರ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುವುದಿಲ್ಲ. ಆದರೆ ಅಪಘಾತದಲ್ಲಿ ಪತ್ನಿ ಗಾಯಗೊಂಡಿರುವ ಸುದ್ದಿ ಕಿವಿಗೆ ಬಿದ್ದ ಕೂಡಲೇ ಆಸ್ಪತ್ರೆಗೆ ಆಗಮಿಸಿದ್ದರು. ಅನಾರೋಗ್ಯದ ಮಧ್ಯೆಯೂ ಪತ್ನಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಲು ರವೀಂದ್ರ ದೌಡಾಯಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಅವರು ಚೆನ್ನಾಗಿದ್ದಾರೆ ಬೆನ್ನಿಗೆ ಪೆಟ್ಟಾಗಿದೆ. ಡಾಕ್ಟರ್ ಸ್ವಲ್ಪ ರೆಸ್ಟ್ ಮಾಡಲಿಕ್ಕೆ ಹೇಳಿದ್ದಾರೆ. ಯಾರ ಜೊತೆ ಜಾಸ್ತಿ ಮಾತನಾಡಬೇಡಿ ಎಂದು ತಿಳಿಸಿದ್ದಾರೆ ಎಂದು ರವೀಂದ್ರ ಹೇಳಿದರು.