ಬೆಂಗಳೂರು:- ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ CID ತನಿಖೆಯಲ್ಲಿ ಸ್ಪೋಟಕ ಮಾಹಿತಿ ಹೊರಬದ್ದಿದೆ ಎನ್ನಲಾಗಿದೆ.
ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ. ಫೋರೆನ್ಸಿಕ್ ಪರೀಕ್ಷೆಯಲ್ಲಿ ಅವಾಚ್ಯ ಶಬ್ದ ಬಳಸಿರುವುದು ದೃಢಪಟ್ಟಿದೆ. ನಾಲ್ಕು ಗಂಟೆಗಳ ವಿಡಿಯೋದಲ್ಲಿ ಏಳು ಬಾರಿ ಅವಾಚ್ಯ ಶಬ್ದ ಬಳಸಲಾಗಿದೆ ಎನ್ನಲಾಗಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದರಿಂದ ನ್ಯಾಯಾಲಯದ ಮೂಲಕ ಸಿಐಡಿ ವಿಚಾರಣೆಗೆ ಮುಂದಾಗಿದೆ.
ಘಟನೆ ಹಿನ್ನೆಲೆ:
ಬೆಳಗಾವಿ ಅಧಿವೇಶನ ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಭಾರೀ ಹೈಡ್ರಾಮ ಉಂಟಾಗಿತ್ತು. ಪರಿಷತ್‌ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಆಗ ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ಅವರು ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆರೋಪ ಮಾಡಿದ್ದರು. ಸಿಟಿ ರವಿ ಅವರ ಬಂಧನ ಕೂಡ ಆಗಿತ್ತು ಬಳಿಕ ಜಾಮೀನು ಪಡೆದು ಹೊರ ಬಂದಿದ್ದಾರೆ.
ಈ ಬಗ್ಗೆ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿ ಗೃಹ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದರು. ಅದನ್ನ ನಾವು ನಿನ್ನೆ ಖಂಡಿಸಿ ಪ್ರತಿಭಟನೆ ನಡೆಸಿದೆವು. ಏಕೆಂದರೆ ಅಂಬೇಡ್ಕರ್ ಅವರಿಂದಲೇ ನಾವು ಎಂಎಲ್‌ಎ, ಮಂತ್ರಿ ಆಗಲಿಕ್ಕೆ ಸಾಧ್ಯವಾಗಿದೆ ಎಂದರು.
ಧರಣಿ ಮುಗಿಸಿ ಸೀಟ್ ಮೇಲೆ ಕುಳಿತಿದ್ದೇವು ಆಗ ಸಿಟಿ ರವಿ ಅವರು ಇದ್ದಕ್ಕಿದ್ದಂತೆ ಬಂದು ರಾಹುಲ್ ಗಾಂಧಿಗೆ ಡ್ರಗ್ ಎಡಿಕ್ಟ್ ಎಂದರು, ಆಗ ನನಗೆ ಕೋಪ ಬಂದು, ತಾವು ಕೂಡ ಎಕ್ಸಿಡೆಂಟ್ ಮಾಡಿದ್ದೀರಿ ನೀವು ಕೊಲೆಗಾರರಾಗ್ತಿರಿ ಅಂದೆ… ಆಗ ಅವರು ತಿರುಗೆ ನನಗೆ ಹೇಳಬಾರದ ಪದವನ್ನ ಒಂದಬಾರಿ ಅಲ್ಲ ಎರಡು ಬಾರಿ ಅಲ್ಲ ಪದೇ ಪದೇ ಮೂರ್ನಾಲ್ಕು ಬಾರಿ ಹೇಳಿದ್ರು ಎಂದು ಹೆಬ್ಬಾಳ್ಕರ್ ಅವರು ಕಣ್ಣೀರು ಹಾಕಿದ್ದರು.