ಕೋಲಾರ: ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಗಡಾರಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ.
Advertisement
ಮಂಜುನಾಥ್ (38) ಕೊಲೆಯಾದ ವ್ಯಕ್ತಿಯಾಗಿದ್ದು, ಕಣ್ಣೂರು ಗ್ರಾಮದ ಅಪ್ಪಿ, ರಾಜೇಶ್ ಎಂಬುವವರು ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮಂಜುನಾಥ್ ಹಾಗೂ ಅಪ್ಪಿ ಎಂಬುವವರ ಮಧ್ಯೆ ಜಮೀನು ವಿವಾದ ನಡೆಯುತ್ತಿತ್ತು. ಹಾಗಾಗಿ ಅಪ್ಪಿ ಹಾಗೂ ರಾಜೇಶ್ ಎಂಬುವರು ಗಡಾರಿಯಿಂದ ಹಲ್ಲೆ ಮಾಡಿದ್ದಾರೆ.
ತೀವ್ರ ರಕ್ತಸ್ರಾವವಾಗಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕ್ಯಾಸಂಬಳ್ಳಿ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದು, ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.