ಸಕಲೇಶಪುರದಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

0
Spread the love

ಹಾಸನ: ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಆಚಂಗಿ-ದೊಡ್ಡಸಾಗರ ಬಳಿ ಮತ್ತೆ ಮಣ್ಣು ಕುಸಿತವಾಗಿದೆ. ಹಾಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಇನ್ನೂಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ.

Advertisement

ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ.


Spread the love

LEAVE A REPLY

Please enter your comment!
Please enter your name here