ಭೂಕುಸಿತ: ಬಾಳೆಬರೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ಸ್ಥಗಿತ!

0
Spread the love

ಶಿವಮೊಗ್ಗ:- ಇಲ್ಲಿನ ಬಾಳೆಬರೆ ಘಾಟಿಯಲ್ಲಿ ಭೂಕುಸಿತ ಉಂಟಾಗಿದ್ದು, ಭಾರಿ ವಾಹನ ಸಂಚಾರ ತಾತ್ಕಾಲಿಕ ಬಂದ್ ಮಾಡಲಾಗಿದೆ.ಮಳೆ ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷತಾ ದೃಷ್ಠಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಈ ಕ್ರಮ ಕೈಗೊಂಡಿದ್ದಾರೆ.

Advertisement

ತೀರ್ಥಹಳ್ಳಿ– ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಮಳೆ ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷತಾ ದೃಷ್ಠಿಯಿಂದ ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ತೀರ್ಥಹಳ್ಳಿಯಿಂದ ರಾವೆ – ಕಾನಗೋಡು – ಮಾಸ್ತಿಕಟ್ಟೆ- ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ – ರಾವೆ- ಕಾನುಗೋಡು ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸುವಂತೆ ತಿಳಿಸಲಾಗಿದೆ.

ನಗರ – ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆ ತೀರ್ಥಹಳ್ಳಿಯಿಂದ ಯಡೂರು – ಸುಳಗೋಡು – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.


Spread the love

LEAVE A REPLY

Please enter your comment!
Please enter your name here