ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಕೆ.ಸಿ. ರಾಣಿ ರಸ್ತೆಯ ಸಾಯಿಬಾಬಾ ಮಂದಿರದ ಬಳಿಯ ನಿವಾಸಿ ಲತಾ ರವಿ ಬೆಟಗೇರಿ (ಕುಲಕರ್ಣಿ) ರವಿವಾರ ನಿಧನರಾದರು. ಮೃತರಿಗೆ ಪತಿ ಹಾಗೂ ಬಂಧು-ಬಳಗವಿದೆ.
ಗದಗ-ಬೆಟಗೇರಿ ಲಯನ್ಸ್ ಕ್ಲಬ್‌ನ ಪ್ರೇರಣೆಯಿಂದಾಗಿ ಕುಟುಂಬಸ್ಥರು ಮೃತರ ನೇತ್ರದಾನ ಮಾಡಲು ಒಪ್ಪಿಗೆ ಸೂಚಿಸಿದ್ದರನ್ವಯ ಗದಗ ಜಿಮ್ಸ್‌ನ ನೇತ್ರ ತಜ್ಞರ ತಂಡ ನೇತ್ರದಾನ ಪ್ರಕ್ರಿಯೆ ಕೈಗೊಂಡರು.
ಈ ಸಂದರ್ಭದಲ್ಲಿ ರವಿ ಬೆಟಗೇರಿ, ಲಯನ್ಸ್ ಕ್ಲಬ್ ಅಧ್ಯಕ್ಷ ರಾಜು ವೇರ್ಣೆಕರ, ಕಾರ್ಯದರ್ಶಿ ರಾಜಣ್ಣ ಮಲ್ಲಾಡದ, ಖಜಾಂಚಿ ರೇಣುಕಾ ಪ್ರಸಾದ ಹಿರೇಮಠ, ರಮೇಶ ಶಿಗ್ಲಿ, ಸಂಜಯ ರುದ್ದಂ ಮುಂತಾದವರಿದ್ದರು.



