HomeIndia Newsಪ್ರತಿಭಟನೆ ಮಾಡಿದರೆ ಲಾಠಿಚಾರ್ಜ್‌ ಸಮರ್ಥನೀಯವಲ್ಲ: ನೀಟ್‌ ಹೋರಾಟ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

ಪ್ರತಿಭಟನೆ ಮಾಡಿದರೆ ಲಾಠಿಚಾರ್ಜ್‌ ಸಮರ್ಥನೀಯವಲ್ಲ: ನೀಟ್‌ ಹೋರಾಟ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

For Dai;y Updates Join Our whatsapp Group

ನವದೆಹಲಿ: ಪ್ರತಿಭಟನೆ ನಡೆಸಿದ ಕಾರಣಕ್ಕೆ ಮಾತ್ರ ಲಾಠಿಚಾರ್ಜ್‌ ನಡೆಸುವುದು ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರ ಬಲಪ್ರಯೋಗ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ಶಾಂತಿಯುತ ಪ್ರತಿಭಟನೆ ಸಂವಿಧಾನಬದ್ಧ ಹಕ್ಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್‌, ಪೆಲೆಟ್‌ ಗನ್‌ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದ್ದರು. ದೇಶದ ವಿವಿಧ ಭಾಗಗಳಲ್ಲೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ನಡೆದಿದೆ ಎಂಬ ಆರೋಪಗಳ ನಡುವೆ ಈ ಕುರಿತು ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರಿದ್ದ ಪೀಠ ಅರ್ಜಿಗಳ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಶಾಂತಿಯುತ ಹಾಗೂ ಕಾನೂನುಬದ್ಧ ಪ್ರತಿಭಟನೆ ನಡೆಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ನೀಡಿದೆ. ಕೇವಲ ಪ್ರತಿಭಟನೆ ನಡೆಸಿದ ಕಾರಣಕ್ಕೆ ಲಾಠಿಚಾರ್ಜ್‌ ನಡೆಸುವುದು ನ್ಯಾಯಸಮ್ಮತವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಇದೇ ವೇಳೆ, ಪ್ರತಿಭಟನೆಗಳ ವೇಳೆ ಪೊಲೀಸರ ಬಲಪ್ರಯೋಗದ ಬಗ್ಗೆ ಸ್ವತಂತ್ರ ಪರಿಶೀಲನೆ ನಡೆಯಬೇಕು. ದೇಶಾದ್ಯಂತ ಪ್ರತಿಭಟನೆಗಳನ್ನು ನಿರ್ವಹಿಸಲು ಪೊಲೀಸರಿಗೆ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img