ಜಾನುವಾರುಗಳಿಗೆ ಉಚಿತವಾಗಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

0
Launch of free vaccination program for cattle
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಜಾನುವಾರುಗಳಿಗೆ ಕೆಲ ಸಂದರ್ಭದಲ್ಲಿ ಕಂಡು ಬರುವ ಕಾಲು-ಬಾಯಿ ಬೇನೆಯಿಂದ ಸಮಸ್ಯೆ ಎದುರಿಸುವಂತಾಗುತ್ತಿದ್ದು, ಈ ನಿಟ್ಟನಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕುವ ಕಾರ್ಯಕ್ರಮ ನಡೆಯುತ್ತಿದೆ.

Advertisement

ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಪಟ್ಟಣದಲ್ಲಿ ಮಂಗಳವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಜಾನುವಾರುಗಳಿಗೆ ಉಚಿತ ಕಾಲು-ಬಾಯಿ ಬೇನೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರಕಾರಗಳು ನೀಡುವ ಈ ಯೋಜನೆ ರೈತರಿಗೆ ಹೆಚ್ಚು ಪ್ರಯೋಜಕಾರಿಯಾಗಿದ್ದು, ಸರಿಯಾದ ವೇಳೆಯಲ್ಲಿ ಜಾನುವಾರುಗಳಿಗೆ ಲಸಿಕೆ ದೊರಕಿಸುವದರಿಂದ ರೋಗಗಳನ್ನು ನಿಯಂತ್ರಣ ಮಾಡಬಹುದಾಗಿದೆ. ಇದೀಗ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗಿದ್ದು, ಮನೆ ಮನೆಗಳಿಗೆ ಬರುವ ಸಿಬ್ಬಂದಿಗಳಿಗೆ ಸಹಕರಿಸಿ ಔಷಧಿಗಳನ್ನು ಹಾಕಿಸುವಂತೆ ಸಲಹೆ ನೀಡಿದರು.

ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಸುನೀಲ ಮಹಾಂತಶೆಟ್ಟರ ಹಾಗೂ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು, ರೈತರು ಇದ್ದರು.


Spread the love

LEAVE A REPLY

Please enter your comment!
Please enter your name here