HomeGadag News`ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

`ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರವು ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಮೇ 29ರಿಂದ ಜೂನ್ 12ರವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದೆ.

ಮೊದಲನೆಯ ದಿನ ಶಿಂಗಟರಾಯನಕೇರಿ ಗ್ರಾಮದಲ್ಲಿ ಜಾಥಾದೊಂದಿಗೆ ವಿಜೃಂಭಣೆಯಿಂದ ಅಭಿಯಾನ ಪ್ರಾರಂಭವಾಯಿತು. ರೋಣ ತಾಲೂಕಿನ ನರೇಗಲ್ಲ, ಚಿಕ್ಕಮಣ್ಣೂರು, ಸವಡಿ ಮತ್ತು ನಿಡಗುಂದಿಕೊಪ್ಪ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಐ.ಸಿ.ಎ.ಆರ್-ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಗಳು, ಕರ್ನಾಟಕ ಸರಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮಾ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಕೃಷಿಕ ಸಮಾಜದ ಪ್ರತಿನಿಧಿಗಳು, ರೈತ ಮುಖಂಡರು, ರೈತ ಉತ್ಪಾದಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ಮುಂಗಾರು ಬೆಳೆಗಳ ಬೇಸಾಯ ಕ್ರಮಗಳು, ಕೀಟ ಹಾಗೂ ರೋಗ ನಿರ್ವಹಣೆ ಬಗ್ಗೆ ಮಾಹಿತಿ ಕೈಪಿಡಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು. ಮುಂಡರಗಿ ಹಾಗೂ ರೋಣ ತಾಲೂಕಿನ ಒಟ್ಟು 7 ಗ್ರಾಮಗಳ ರೈತರು ಅಭಿಯಾನದಲ್ಲಿ ಭಾಗವಹಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!