ವಿಜಯಸಾಕ್ಷಿ ಸುದ್ದಿ, ಗದಗ: ವಿಶೇಷ ಚೇತನ ವ್ಯಕ್ತಿಗಳಿಗೆ ಅಡತಡೆ ರಹಿತ ವಾತಾವರಣವನ್ನು ಕಲ್ಪಿಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಶಿವನಗೌಡ್ರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯೋಗದಲ್ಲಿ ಸುಗಮ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಲಾ ವಿಶೇಷ ಚೇತನರಿಗೆ ಸರ್ಕಾರಿ ಹಾಗೂ ಸಾರ್ವಜನಿಕ ಕಚೇರಿಗಳಿಗೆ ಭೇಟಿ ನೀಡಲು ಮುಕ್ತ ಅವಕಾಶ ನೀಡಲಾಗಿದೆ. ಅದಕ್ಕಾಗಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ರ‍್ಯಾಪ್ ಅಳವಡಿಸಲು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗುವುದು. ಇದರಿಂದ ಹಿರಿಯ ನಾಗರಿಕರಿಗೆ, ವಿಕಲಚೇತನರಿಗೂ ಹಾಗೂ ಗರ್ಭಿಣಿಯರಿಗೆ ಅನುಕೂಲವಾಗುವುದೆಂದು ಎಂದು ಹೇಳಿದರು.
ಜಿಲ್ಲಾ ವಿಕಲಚೇತನರ ಅಧಿಕಾರಿ ಮಹಾಂತೇಶ ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಎಲ್ಲಾ ಸಾರ್ವಜನಿಕ ಸರ್ಕಾರಿ/ಖಾಸಗಿ ಕಟ್ಟಡಗಳಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಅಡೆತಡೆ ರಹಿತ ವಾತಾವರಣವನ್ನು ಕಲ್ಪಿಸುವ ಕುರಿತು ಮಾಹಿತಿ ತಿಳಿಸಿದರು.
ಈ ಸಂದರ್ಭದಲ್ಲಿ ಎಬಿಡಿ ಸಂಸ್ಥೆಯ ಬೆಳಗಾವಿ ವಿಭಾಗದ ಸಂಯೋಜಕಿ ಅರ್ಚನಾ ದೇವತಿ, ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ, ಗದಗ ತಾಲೂಕಿನ ಸಂಯೋಜಕ ಖಾಜಾಹುಸೇನ ಕಾತರಕಿ, ಬಸವರಾಜ ಓಲಿ, ಶಿವಾನಂದ, ಶಶಿಕಲಾ ವಡ್ಡಟ್ಟಿ, ಭಾರತಿ ಹಾಗೂ ಗದಗ ತಾಲೂಕಿನ ಎಲ್ಲಾ ಗ್ರಾಮೀಣ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.