ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರೋದು ಷಂಡ ಸರ್ಕಾರ. ಇದೊಂದು ಅಸಂಸ್ಕೃತಿ ಪದ ಅಂತಾ ನನ್ನ ಮೇಲೆ ಕೇಸ್ ಹಾಕಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದರು.
Advertisement
ಇನ್ನೂ ರಾಜ್ಯದಲ್ಲಿ ಮಹಿಳೆಯರಿಗಾಗಲಿ ಯಾರಿಗೂ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗೃಹಮಂತ್ರಿಗಳು ಅವರದ್ದೇ ಆದ ಹೇಳಿಕೆ ಕೊಡುತ್ತಾ ಹೊರಟಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ತನ್ನ ಹಗರಣಗಳನ್ನ ಮುಚ್ಚಿ ಹಾಕೋಕೆ ಕಾಂಗ್ರೆಸ್ ಸರ್ಕಾರ ವಿಷಯಾಂತರ ಮಾಡುತ್ತಿದೆ ಎಂದು ಅವರು ಹೇಳಿದರು.