ಬೆಂಗಳೂರು: ನಗರದ ವಕೀಲ ಮಂಜುನಾಥ್ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಮಿತ್ ಕುಮಾರ್ ದುಬೆಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದು ಸುಮಾರು ಒಂದು ತಿಂಗಳ ಬಳಿಕ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ.
ಅಕ್ಟೋಬರ್ 19ರಂದು ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿ ತಮಿಳುನಾಡು, ತೆಲಂಗಾಣ, ಬಿಹಾರ ಹಾಗೂ ದೆಹಲಿಯಲ್ಲಿ ಶೋಧ ಕಾರ್ಯ ನಡೆಸಿದ್ದರು.
ಇದೀಗ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಅಮಿತ್ ಕುಮಾರ್ ದುಬೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿ ಪವನ್ ಕುಮಾರ್ ದುಬೆಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ.









