HomeGadag Newsವಕೀಲರು ಆರೋಗ್ಯದ ಬಗ್ಗೆ ಗಮನ ಹರಿಸಿ: ನ್ಯಾ. ಬಸವರಾಜ

ವಕೀಲರು ಆರೋಗ್ಯದ ಬಗ್ಗೆ ಗಮನ ಹರಿಸಿ: ನ್ಯಾ. ಬಸವರಾಜ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಕೀಲರು ಸಮಾಜ ಸೇವೆಯಂತಹ ವೃತ್ತಿ ಜೀವನದಲ್ಲಿದ್ದು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸದ ಜೊತೆಗೆ ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನ, ರೂರಲ್ ಮೆಡಿಕಲ್ ಸೊಸೈಟಿ, ಕೆ.ಎಚ್. ಪಾಟೀಲ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಸಂಸ್ಥೆ ಹುಲಕೋಟಿ, ಜಿಲ್ಲಾ ನ್ಯಾಯಾಂಗ ವಕೀಲರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಆಯುಷ್ ಆರೋಗ್ಯ ಚಿಕಿತ್ಸಾ ಶಿಬಿರ ಹಾಗೂ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆ ವಕೀಲರಿಗೆ ಇಂತಹ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಿದ್ದು ಉತ್ತಮ ಕಾರ್ಯವಾಗಿದೆ. ಮಾನವರು ಯಾವುದೇ ರೀತಿಯ ಸಾಧನೆ ಮಾಡಬೇಕಾದರೆ ಆರೋಗ್ಯ ಅತ್ಯವಶ್ಯಕವಾಗಿದೆ. ಎಲ್ಲ ವಕೀಲರು ತಮ್ಮ ದಿನನಿತ್ಯದ ಒತ್ತಡದ ಬದುಕಿನಲ್ಲಿ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯ ಹೊಂದಬೇಕು ಎಂದು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ ಜಯಪಾಲಸಿಂಗ್ ಮಾತನಾಡಿ, ರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಉಚಿತ ಆಯುಷ್ ಆರೋಗ್ಯ ಚಿಕಿತ್ಸಾ ಶಿಬಿರ ಹಾಗೂ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಇಂದಿನ ದಿನಮಾನಗಳಲ್ಲಿ ದಿನದಿಂದ ದಿನಕ್ಕೆ ಅನೇಕ ಖಾಯಿಲೆಗಳು ಬರುತ್ತಿದ್ದು, ವಕೀಲರು ತಮ್ಮ ಕೆಲಸದ ಒತ್ತಡದ ಜೊತೆಗೆ ಆರೋಗ್ಯ ಬಗ್ಗೆ ಕಾಳಜಿ ವಹಿಸಬೇಕು. ಕೋವಿಡ್‌ನಂತಹ ಸಂದರ್ಭದಲ್ಲಿ ಆಯುಷ್ ಇಲಾಖೆಯ ಮಹತ್ವ ಎಲ್ಲರಿಗೂ ತಿಳಿದಿದ್ದು, ಮನುಷ್ಯ ಧ್ಯಾನ, ಯೋಗಾಸನ, ಉತ್ತಮ ಆಹಾರ ಪದ್ಧತಿ ಪಾಲಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎ.ಎಂ. ಹದ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಸೇರಿದಂತೆ ಗಣ್ಯರು ಹಾಜರಿದ್ದರು. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ ಸ್ವಾಗತಿಸಿದರು. ಜಿಲ್ಲಾ ವಕೀಲ ಸಂಘದ ಜಂಟಿ ಕಾರ್ಯದರ್ಶಿ ಪ್ರಕಾಶ ಕಣಗಿನಹಾಳ ನಿರ್ವಹಿಸಿದರು. ಜಿಲ್ಲಾ ಆಯುಷ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಂಜೀವ ನಾರಪ್ಪನವರ ವಂದಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ ಮಾತನಾಡಿ, ಸದಾ ಕೆಲಸದೊತ್ತಡದಲ್ಲಿರುವ ವಕೀಲರು ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಉತ್ತಮ ಜೀವನ ಪದ್ಧತಿಯನ್ನು ಹೊಂದಿ ಆರೋಗ್ಯವಾಗಿಬೇಕು. ಶಿಬಿರದಲ್ಲಿ ಉಚಿತವಾಗಿ ಔಷಧಿಗಳನ್ನು ನೀಡಲಾಗುತ್ತಿದ್ದು, ಅವುಗಳನ್ನು ಪಡೆದು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!