ಕಾರು ಅಪಘಾತ ಪ್ರಕರಣ: 13 ದಿನಗಳ ಬಳಿಕ ಆಸ್ಪತ್ರೆಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್!

0
Spread the love

ಬೆಳಗಾವಿ:- ಜನವರಿ 14ರಂದು ಸಂಭವಿಸಿದ್ದ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 13 ದಿನಗಳ ಬಳಿಕ ಇದೀಗ ಡಿಸ್ಚಾರ್ಜ್ ಆಗಿದ್ದಾರೆ.

Advertisement

ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬಿಡುಗಡೆ ಬಳಿಕ ಮಾತನಾಡಿದ ಹೆಬ್ಬಾಳಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ ಬಂದಿದ್ದೇನೆ. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here