ಮಂಡ್ಯ: KRS ಇತಿಹಾಸಕ್ಕೆ ಮಸಿ ಬಳಿಯುವ ಕೆಲಸ ಕೈ ನಾಯಕರು ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮೈಸೂರು ರಾಜ ಮನೆತನಕ್ಕೆ ಕಳಂಕ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಈಗ ಕೆಆರ್ಎಸ್ ಇತಿಹಾಸಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
ಪದೇ ಪದೇ ಟಿಪ್ಪು ಸುಲ್ತಾನರ ಹೆಸರು ತಂದು ಕಳಂಕಿತ ಹೇಳಿಕೆಗಳನ್ನು ನೀಡುತ್ತಿದ್ದು, ಇದೇ ಹಾದಿಯಲ್ಲಿ ನಡೆದಿರುವ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಯಾವುದೋ ಇದುವರೆಗೂ ಕಾಣದ ಶಿಲಾನ್ಯಾಸವನ್ನು ಇಟ್ಟುಕೊಂಡು ಕೆಆರ್ಎಸ್ನ ಹೆಸರು ಬದಲಿಸಲು ಪೀಠಿಕೆ ಹಾಕಿದ್ದಾರೆ. ಕೆಆರ್ಎಸ್ ಹೆಸರು ಬದಲಿಸಲು ಯಾರದೋ ಕೈವಾಡವಿದ್ದು, ಹುನ್ನಾರವೆಸಗುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.