ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ: ಮೂವರ ಸ್ಥಿತಿ ಗಂಭೀರ

0
Spread the love

ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮುನ್ಸಿಪಾಲ್ ಕಾಲೇಜಿನ ಮುಂಭಾಗ ನಡೆದಿದೆ. ನಗರದ ಫರ್ಜಾನಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.

Advertisement

ಮನೆ ಮಾಲೀಕರಾದ ಫರ್ಜಾನಾ ಕೆಲಸಕ್ಕೆ ತೆರಳಿದ್ದ ವೇಳೆ ಅವರ ಮಗ ರಫೀಕ್ (4) ಹಾಗೂ ಮಗಳು ಹರ್ಷಿಯಾ ಭಾನು (16) ಮನೆಯಲ್ಲಿದ್ದರು. ಈ ವೇಳೆ ಮನೆಯಿಂದ ಗ್ಯಾಸ್ ವಾಸನೆ ಬರುತ್ತಿದೆ ಎಂದು ಪಕ್ಕದ ಮನೆಯ ಹೇಮಾವತಿ (18) ಎಂಬಾಕೆ ಬಂದಿದ್ದಾಳೆ. ಈ ವೇಳೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಮೂವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರಿಗೂ 35 ರಿಂದ 40% ಸುಟ್ಟ ಗಾಯಗಳಾಗಿದ್ದು ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

 


Spread the love

LEAVE A REPLY

Please enter your comment!
Please enter your name here