ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿಯ ಎಫ್.ಎಂ. ಡಬಾಲಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಎಂ.ಸಿ. ಭಜಂತ್ರಿ ಇವರಿಗೆ ಕಪ್ಪತ್ತಗಿರಿ ಫೌಂಡೇಶನ್ ಸಾಹಿತ್ಯ, ಶಿಕ್ಷಣ, ಮತ್ತು ಸಾಂಸ್ಕೃತಿಕ ಕಲಾವೇದಿಕೆ ಕಳಸಾಪೂರ ಗದಗ ಇವರ ವತಿಯಿಂದ ಭಾನುವಾರ ಜರುಗಿದ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ `ಜಿಲ್ಲಾ ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವಿದ್ಯಾರ್ಥಿಗಳ ಭವಿಷ್ಯದ ಒಳಿತಿಗಾಗಿ ಸಲ್ಲಿಸಿದ ಅಮೋಘ ಸೇವೆ, ಕರ್ತವ್ಯ ನಿಷ್ಠೆ, ಸಮಯಪ್ರಜ್ಞೆ ಹಾಗೂ ವಿದ್ಯಾರ್ಥಿಗಳಲ್ಲಿ ನಾವೀನ್ಯಮಯ ಬೋಧನೆಯ ಜೊತೆಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪ್ರೇರಣೆ ನೀಡಿದ್ದಕ್ಕೆ ಅಭಿನಂದನಾ ಪತ್ರದ ಜೊತೆಗೆ ಸನ್ಮಾನಿಸಿ ಗೌರವಿಸಲಾಗಿದೆ.



