HomeDharwadತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜೂನ್ 7ರಂದು ಜಿಲ್ಲೆಯ ಸಾರ್ವಜನಿಕರು ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ ಹಾಗೂ ಮಾಂಸ ಸಾಗಾಣಿಕೆ ನಿಷೇಧಿಸಿದೆ ಎಂದು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ರ ಪರಿಣಾಮಕಾರಿ ಅನುಷ್ಠಾನ ಮತ್ತು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಸಭೆ ಜರುಗಿಸಿ ಮಾತನಾಡಿದರು.

ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ದ ಪ್ರಕಾರ 13 ವರ್ಷ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಮಾತ್ರ ವಧೆ ಮಾಡಲು ಅವಕಾಶವಿದೆ. ಎತ್ತು, ಆಕಳು ಮತ್ತು ಕರು ಇವುಗಳನ್ನು ವಧೆ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅನಧಿಕೃತ ವಧಾಲಯಗಳನ್ನು ಗುರುತಿಸಿ, ಸೀಜ್ ಮಾಡಲು ಮತ್ತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಒಂದು ಸರ್ಕಾರಿ ಹಾಗೂ 10 ಖಾಸಗಿ ಗೋಶಾಲೆಗಳಿದ್ದು, ರಕ್ಷಿಸಿದ ಜಾನುವಾರುಗಳನ್ನು ಕಳುಹಿಸಬಹುದು. ಮಹಾನಗರ ಪಾಲಿಕೆ ಅಥವಾ ನಗರ ಸ್ಥಳೀಯ ಸಂಸ್ಥೆಗಳು ಜಾನುವಾರುಗಳ ಸಾಗಾಣಿಕೆಗೆ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಅಧಿಕಾರಿಗಳು ತಪ್ಪಿಸ್ಥರ ವಿರುದ್ಧ ಎಫ್.ಐ.ಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮವಹಿಸಬೇಕು. ಈ ಎಲ್ಲ ಕ್ರಮಗಳನ್ನು ನಿಯಮಾನುಸಾರ ಕೈಗೊಳ್ಳಲು ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರಾಗಿರುವ ತಹಸೀಲ್ದಾರರು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಡಿ.ಸಿ ದಿವ್ಯ ಪ್ರಭು ಅವರು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್ ಹಾಗೂ ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾಂವಿ ಮಾತನಾಡಿದರು. ಉಪನಿರ್ದೇಶಕರ ಕಚೇರಿಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಲಿಂಗರಾಜ ಬಿ.ಎಸ್. ಸ್ವಾಗತಿಸಿ, ಸಭೆ ನಿರ್ವಹಿಸಿದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ದಯಾನಂದ ಶೆಗುಣಸಿ, ನಾಗಯ್ಯ ಕಾಡದೇವರಮಠ, ಎಲ್ಲ ತಾಲೂಕುಗಳ ತಹಸೀಲ್ದಾರರು, ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ಮಹಾನಗರ, ಎಲ್ಲ ನಗರ ಪಟ್ಟಣಗಳ ಹಾಗೂ ಇತರ ಪ್ರದೇಶಗಳಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ರ ಉಲ್ಲಂಘನೆ ಆಗದಂತೆ ಮುಂಜಾಗ್ರತೆ ವಹಿಸಲು ಪ್ರತಿ ತಾಲೂಕಿಗೆ ಆಯಾ ತಹಸೀಲ್ದಾರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದೆ. ಪ್ರತಿ ಸಮಿತಿಯು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿನ ಪ್ರಾಣಿ ವಧಾಲಯಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಬೇಕು. ನೋಂದಣಿಯಾಗದೇ ಅನಧಿಕೃತವಾಗಿ ಪ್ರಾಣಿ ವಧಾಲಯ ಆರಂಭಿಸಿದ್ದಲ್ಲಿ ತಕ್ಷಣ ಸೀಜ್ ಮಾಡಿ, ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!