ಬೆಂಗಳೂರು: ನಟ ಯಶ್ ಹುಟ್ಟುಹಬ್ಬದ ಸಂಭ್ರಮ ಇದೀಗ ಕಾನೂನು ವಿವಾದವಾಗಿ ತಿರುಗಿದೆ. ರಸ್ತೆಯಲ್ಲಿ ಅನಧಿಕೃತವಾಗಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ವೇಣು ಕ್ರಿಯೇಶನ್ ವಿರುದ್ಧ ಪೊಲೀಸ್ ಎಫ್ಐಆರ್ ದಾಖಲಾಗಿದೆ.
ಜ.8ರಂದು ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಗಾಲ್ಫ್ ಕ್ಲಬ್ ಎದುರು, ಅವರ ಮನೆ ಬಳಿಯ ರಸ್ತೆಯಲ್ಲಿ ಹುಟ್ಟುಹಬ್ಬ ಶುಭಾಶಯ ಕೋರಿ ಹಲವು ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಆದರೆ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೆ ಬ್ಯಾನರ್ ಹಾಕಲಾಗಿದೆ ಎಂಬ ಆರೋಪದ ಮೇರೆಗೆ ಜಿಬಿಎ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ವೇಣು ಕ್ರಿಯೇಶನ್ ಅವರನ್ನು ಆರೋಪಿಯಾಗಿ ಉಲ್ಲೇಖಿಸಲಾಗಿದೆ. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್ಐಆರ್ ದಾಖಲಾಗಿದೆ.



