• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ವಿಧಾನಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೇಲುಗೈ

Vijaya Sakshi News Desk by Vijaya Sakshi News Desk
October 28, 2026
in Politics News
ವಿಧಾನಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ ಹಿನ್ನಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮೇಲುಗೈ
0
SHARES
11
VIEWS
Share on Facebook

ಬೆಂಗಳೂರು:- ಕರ್ನಾಟಕ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಗೆಲುವು ಸಾಧಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚುನಾವಣೆಯ ಫಲಿತಾಂಶ ಆಡಳಿತಾರೂಢ ಕಾಂಗ್ರೆಸ್‌ಗೆ ಹಿನ್ನಡೆ ಉಂಟುಮಾಡಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಹೊಸ ಹುರುಪು ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಫಲಿತಾಂಶ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಗೆಲುವು:-

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಹಾಗೂ ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ವಿರುದ್ಧ ಅವರು 908 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಸತತ ಐದು ಬಾರಿ ಗೆಲುವು ಸಾಧಿಸಿದ್ದ ಪುಟ್ಟಣ್ಣ ಅವರಿಗೆ ಈ ಬಾರಿ ಸೋಲು ಎದುರಾಗಿದೆ. ರಂಗನಾಥ್ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬಳಿಕ ಚುನಾವಣಾಧಿಕಾರಿಯಿಂದ ರಂಗನಾಥ್ ಗೆಲುವಿನ ಪ್ರಮಾಣಪತ್ರ ಸ್ವೀಕರಿಸಿದರು.

ಗೆಲುವಿನ ಬಳಿಕ ಮಾತನಾಡಿದ ರಂಗನಾಥ್, ಇವಿಎಂ ಸರಿಯಿಲ್ಲ ಎಂದು ಆರೋಪಿಸುವವರಿಗೆ ಈ ಫಲಿತಾಂಶ ಉತ್ತರವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿಗೆ ಐದನೇ ಗೆಲುವು:-

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ವಿರುದ್ಧ ಜಯಗಳಿಸಿರುವ ನಮೋಶಿ, ಸತತ ಐದನೇ ಬಾರಿಗೆ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಈ ಗೆಲುವಿನೊಂದಿಗೆ ಕ್ಷೇತ್ರದಲ್ಲಿ ಬಿಜೆಪಿಯ ಹಿಡಿತವನ್ನು ಮುಂದುವರಿಸುವಲ್ಲಿ ನಮೋಶಿ ಯಶಸ್ವಿಯಾಗಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸಂಕನೂರು ಹ್ಯಾಟ್ರಿಕ್:-

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಗೆಲುವು ಸಾಧಿಸುವ ಮೂಲಕ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ವಿರುದ್ಧ ಜಯಗಳಿಸಿರುವ ಸಂಕನೂರು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಈ ಗೆಲುವು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಮತ್ತೊಂದು ಮಹತ್ವದ ಸಾಧನೆಯಾಗಿದೆ.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ.ಎಂ. ಸುರೇಶ್ ಮುನ್ನಡೆ:-

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

‘ಸತ್ಯಮೇವ ಜಯತೇ’ ಎಂದ ಎಚ್.ಡಿ. ಕುಮಾರಸ್ವಾಮಿ;-

ವಿಧಾನಪರಿಷತ್ ಚುನಾವಣೆಯ ಫಲಿತಾಂಶದ ಕುರಿತು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ‘ಸತ್ಯಮೇವ ಜಯತೇ’ ಎಂದು ಬರೆದುಕೊಂಡಿರುವ ಅವರು, ಸುಳ್ಳು, ದುರಾಡಳಿತ, ಹಣಬಲ ಮತ್ತು ತೋಳ್ಬಲಗಳು ಸೋತಿವೆ ಎಂದು ಹೇಳಿದ್ದಾರೆ. ಈ ಚುನಾವಣೆ ಹೊಸ ಭರವಸೆಯ ಸೂರ್ಯೋದಯಕ್ಕೆ ನಾಂದಿ ಹಾಡಿದೆ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿರುವ ಕುಮಾರಸ್ವಾಮಿ, ಮೈತ್ರಿಕೂಟದ ಕಾರ್ಯಕರ್ತರು, ಮುಖಂಡರು ಹಾಗೂ ಮತ ಚಲಾಯಿಸಿದ ಶಿಕ್ಷಕರಿಗೆ ಧನ್ಯವಾದ ಅರ್ಪಿಸಿದ್ದಾರೆ.

2028ರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಫಲಿತಾಂಶ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಯ ಒಗ್ಗಟ್ಟನ್ನು ಶ್ಲಾಘಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿಯಿಂದ ರಂಗನಾಥ್‌ಗೆ ಅಭಿನಂದನೆ:-

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎ.ಪಿ. ರಂಗನಾಥ್ ಅವರಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದರಿಂದ ಈ ಫಲಿತಾಂಶ ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಮೈತ್ರಿಕೂಟದ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ ಶಿಕ್ಷಕರ ಸಮುದಾಯಕ್ಕೂ ಧನ್ಯವಾದ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ವ್ಯಕ್ತಪಡಿಸಿರುವ ನಿಖಿಲ್, ಈ ಚುನಾವಣೆ ಮುಂಬರುವ ರಾಜಕೀಯ ಬೆಳವಣಿಗೆಗಳಿಗೆ ಮುನ್ನುಡಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ಗೆ ಹಿನ್ನಡೆ, ಎನ್‌ಡಿಎಗೆ ಹೊಸ ಹುರುಪು:-

ನಾಲ್ಕು ವಿಧಾನಪರಿಷತ್ ಕ್ಷೇತ್ರಗಳ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಪ್ರತಿಷ್ಠೆಯ ಕಣವಾಗಿತ್ತು. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿರುವುದು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿ ಐದನೇ ಬಾರಿ ಆಯ್ಕೆಯಾಗಿರುವುದು ಮೈತ್ರಿಕೂಟಕ್ಕೆ ಮಹತ್ವದ ಬೆಳವಣಿಗೆಯಾಗಿದೆ.

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸಂಕನೂರು ಹ್ಯಾಟ್ರಿಕ್ ಸಾಧಿಸಿರುವುದು ಬಿಜೆಪಿಗೆ ಮತ್ತಷ್ಟು ಬಲ ನೀಡಿದೆ. ಒಟ್ಟಾರೆ, ಈ ಚುನಾವಣೆಯ ಫಲಿತಾಂಶ ಎನ್‌ಡಿಎ ನಾಯಕರ ಆತ್ಮವಿಶ್ವಾಸ ಹೆಚ್ಚಿಸಿದ್ದು, ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Tags: kannadanewsKarnatakaKarnataka Election NewsLegislative Council Election ResultsVijayasakshivijayasakshinews
ShareSendShare
Previous Post

ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

Next Post

Breaking News: ತಂದೆಯ ಕಣ್ಣೆದುರೇ ಡಿಆರ್‌ಡಿಒ ವಿಜ್ಞಾನಿ ದುರಂತ ಅಂತ್ಯ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Breaking News: ತಂದೆಯ ಕಣ್ಣೆದುರೇ ಡಿಆರ್‌ಡಿಒ ವಿಜ್ಞಾನಿ ದುರಂತ ಅಂತ್ಯ!

Breaking News: ತಂದೆಯ ಕಣ್ಣೆದುರೇ ಡಿಆರ್‌ಡಿಒ ವಿಜ್ಞಾನಿ ದುರಂತ ಅಂತ್ಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

October 28, 2026
ಕಾಂಗ್ರೆಸ್‌’ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ: ನಿಖಿಲ್ ಕುಮಾರಸ್ವಾಮಿ!

4ಕ್ಕೆ 4 ಕ್ಷೇತ್ರದಲ್ಲಿ NDA ಕ್ಲೀನ್ ಸ್ವೀಪ್, ಕಾಂಗ್ರೆಸ್ ಗೆ ಭಾರೀ ಮುಖಭಂಗ: ನಿಖಿಲ್ ಕುಮಾರಸ್ವಾಮಿ

October 28, 2026
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಹೊಸ ಕಾನೂನು ತಂತ್ರ: ಸುಪ್ರೀಂ ಕೋರ್ಟ್‌ನಲ್ಲಿ ಗಡುವು ಸಡಿಲಿಕೆಗೆ ಮನವಿ

ಜೈಲಿನಲ್ಲಿ ನಟ ದರ್ಶನ್ʼಗೆ ಮತ್ತೆ ಬೆನ್ನು ನೋವು: ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಧೀಶರ ಮುಂದೆ ಮನವಿ!

October 28, 2026
‘ಮೋದಿ ಈಗ ಆಕಾಶದಲ್ಲಿದ್ದಾರೆ’: ಇಂದಿರಾ ಬಳಿಕ ಜನರನ್ನು ಸೆಳೆದ ನಾಯಕ ಎಂದ ರಾಜಣ್ಣ!

ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕೆ.ಎನ್.ರಾಜಣ್ಣ ಬೇಸರ! ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ ಎಂದ ಮಾಜಿ ಸಚಿವ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

October 28, 2026
ಕಾಂಗ್ರೆಸ್‌’ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ: ನಿಖಿಲ್ ಕುಮಾರಸ್ವಾಮಿ!

4ಕ್ಕೆ 4 ಕ್ಷೇತ್ರದಲ್ಲಿ NDA ಕ್ಲೀನ್ ಸ್ವೀಪ್, ಕಾಂಗ್ರೆಸ್ ಗೆ ಭಾರೀ ಮುಖಭಂಗ: ನಿಖಿಲ್ ಕುಮಾರಸ್ವಾಮಿ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!