ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇಂದು ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ರಾಜಕೀಯ ಲೆಕ್ಕಾಚಾರಗಳು ಗರಿಗೆದರಿವೆ.
ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್‌ಗೆ 4 ಸ್ಥಾನಗಳು ಬಹುತೇಕ ಖಚಿತವಾಗಿರುವಂತೆ ಕಂಡುಬಂದರೂ, ಐದನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಮುಂದುವರಿದಿದೆ.
ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರ ನಡೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅವರು ಮತದಾನ ಬಳಿಕ “ಆತ್ಮಸಾಕ್ಷಿಗೆ ಮತ ಹಾಕಿದ್ದೇನೆ, ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಹೇಳಿದರೂ, ಯಾರಿಗೆ ಮತ ನೀಡಿದರೆಂಬುದನ್ನು ಬಹಿರಂಗಪಡಿಸದಿರುವುದು ಕ್ರಾಸ್ ವೋಟಿಂಗ್ ಶಂಕೆಗೆ ಕಾರಣವಾಗಿದೆ.
ಮತದಾನ ವೇಳೆ ಜಿಟಿಡಿ ಏಜೆಂಟ್‌ಗಳಿಗೆ ಖಾಲಿ ಮತಪೆಟ್ಟಿಗೆ ತೋರಿಸಿ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ತಮ್ಮ ಮತ ಚಲಾಯಿಸಿದ್ದಾರೆ. ನಂತರ ಬಿಜೆಪಿ ಶಾಸಕರು ವೇದವ್ಯಾಸ ಕಾಮತ್, ಎಸ್.ಆರ್. ವಿಶ್ವನಾಥ್ ಸೇರಿದಂತೆ ಹಲವು ನಾಯಕರು ಮತದಾನ ಮಾಡಿದ್ದಾರೆ.
ಜಿಟಿಡಿ ಕ್ರಾಸ್ ವೋಟ್ ಮಾಡಿದರೆಂಬ ಊಹಾಪೋಹಗಳಿಗೂ ರಾಜಕೀಯ ಕಾರಣಗಳು ಚರ್ಚೆಯಾಗುತ್ತಿವೆ. 2023ರ ಚುನಾವಣೆಯ ಬಳಿಕ ಜೆಡಿಎಸ್ ನಾಯಕರೊಂದಿಗೆ ಅಸಮಾಧಾನ, ಪಕ್ಷದ ಸಭೆಗಳಿಂದ ದೂರವಿರುವುದು, ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಪಕ್ಷದ ಕಾರ್ಯಕ್ರಮಗಳಲ್ಲಿ ಆಹ್ವಾನ ಕೊರತೆ ಸೇರಿದಂತೆ ಹಲವು ಅಸಮಾಧಾನಗಳು ಕಾರಣವಾಗಿರಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಒಟ್ಟು 222 ಶಾಸಕರ ಸಂಖ್ಯಾಬಲದಲ್ಲಿ ಕಾಂಗ್ರೆಸ್ 135, ಬಿಜೆಪಿ 62, ಜೆಡಿಎಸ್ 18 ಸೇರಿದಂತೆ ಇತರರು ಇದ್ದು, 5ನೇ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳು ತಮ್ಮ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಿ ಕಟ್ಟುನಿಟ್ಟಿನ ನಿಗಾವಹಿಸಿರುವುದು ಗಮನಾರ್ಹವಾಗಿದೆ.



