ಹಾವೇರಿ:- ಚಿರತೆ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿದ್ದು, ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಜರುಗಿದೆ.
Advertisement
ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಸಹೋದರರ ಮೇಲೆ ರಾತ್ರಿ 11 ಗಂಟೆ ಸುಮಾರಿಗೆ ಚಿರತೆ ದಾಳಿ ಮಾಡಿದೆ. ಘಟನೆಯಲ್ಲಿ 28 ವರ್ಷದ ಬೀರೆಶ ಬಳಗಾವಿ ಮೃತ ಯುವ ರೈತ. 32 ವರ್ಷದ ಗಣೇಶ ಬಳಗಾವಿ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಗಣೇಶನನ್ನ ಜಿಲ್ಲಾಸ್ಪತ್ರೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.