ಚಾಮರಾಜನಗರ:- ಗುಂಡ್ಲುಪೇಟೆ ತಾಲೂಕಿನ ಹಕ್ಕಲಪುರ ಗ್ರಾಮದಲ್ಲಿ ಸಾಕಷ್ಟು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ.
Advertisement
ಗ್ರಾಮದ ಸತೀಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನನ್ನು ಇರಿಸಲಾಗಿತ್ತು. ಮೂರರಿಂದ ನಾಲ್ಕು ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಹಕ್ಕಲಪುರ ಗ್ರಾಮದ ಸುತ್ತಮುತ್ತ ಚಿರತೆ ಉಪಟಳ ಹೆಚ್ಚಾಗಿ ಜಾನುವಾರು ಮತ್ತು ಮೇಕೆಗಳ ಮೇಲೆ ದಾಳಿ ಮಾಡಿ ಕೊಂದು ಹಾಕುತ್ತಿತ್ತು. ಇದರಿಂದ ರೈತರು ಭಯಬೀತರಾಗುವುದರ ಜೊತೆಗೆ ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಇದೀಗ ಚಿರತೆ ಸೆರೆಯಾಗಿರುವ ಹಿನ್ನೆಲೆ ರೈತರು ನಿರಾಳರಾಗಿದ್ದಾರೆ.