ಚಾಮರಾಜನಗರ: ರಾಜ್ಯದಲ್ಲಿ ಅತಿ ಹೆಚ್ಚು ಚಿರತೆ ಹೊಂದಿರುವ ಪ್ರದೇಶ ಅಂದ್ರೆ ಅದು ಚಾಮರಾಜನಗರ.ಈ ಚಿರತೆ ಹೆಚ್ಚಳ ರೈತರಲ್ಲಿ ಆತಂಕ ಮೂಡಿಸಿದೆ.
ಇದೀಗ ಎರಡು ದಿನಗಳ ಅಂತರದಲ್ಲಿ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
ಬೋನಿಟ್ಟು ಚಿರತೆ ಸೆರೆ ಹಿಡಿಯದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಂಡೀಪುರ ಎಸಿಎಫ್ ಸುರೇಶ್ ವಿರುದ್ಧ ರೈತರು ಕಿಡಿಕಾರಿದ್ದಾರೆ. ಸ್ಥಳಕ್ಕೆ ಎಸಿಎಫ್ ಸುರೇಶ್ ಭೇಟಿ ಕೊಟ್ಟಿದ್ದರು. ಕೂಡಲೇ ಚಿರತೆ ಸೆರೆ ಹಿಡಿಯಲು ರೈತರ ಆಗ್ರಹಿಸಿದ್ದಾರೆ.



