ಚಿತ್ರದುರ್ಗ:- ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
Advertisement
ಚಿರತೆಯ ಚಲನವಲನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಚಿರತೆಯ ಒಡಾಟ ವಾಯು ವಿಹಾರಿಗಳಲ್ಲಿ ಆತಂಕ ಮೂಡಿಸಿದೆ. ಅಲ್ಲದೇ ದವಳಗಿರಿ ಬಡಾವಣೆ ಜನರಲ್ಲಿ ಆತಂಕ ಮನೆಮಾಡಿದೆ.
ಚಿರತೆ ಪ್ರತ್ಯಕ್ಷ ಬಳಿಕ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.