ಬೆಂಗಳೂರು:- ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.
ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 23.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



