ದಿಂಗಾಲೇಶ್ವರ ಶ್ರೀಗಳು ಪರಂಪರೆಯನ್ನು ಅರಿಯಲಿ : ಗೋವಿಂದಗೌಡ್ರ

0
govindagowdra
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ಅದಕ್ಕೆ ಅದರದ್ದೇ ಆದ ಪರಂಪರೆಯೂ ಇದೆ. ಈ ಕಾರಣದಿಂದ ಫಕ್ಕೀರ ದಿಂಗಾಲೇಶ್ವರ ಶ್ರೀಗಳು ಚುನಾವಣೆಗೆ ಸ್ಪರ್ಧೆ ಮಾಡುವ ಪೂರ್ವದಲ್ಲಿ ಮಠವನ್ನು ತ್ಯಜಿಸಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಹೇಳಿದರು.

Advertisement

ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶ್ರೀಗಳು ಚುನಾವಣೆಗೆ ಸ್ಪರ್ಧಿಸಲು ಯಾರ ವಿರೋಧವೂ ಇಲ್ಲ. ಆದರೆ ಅವರು ತಕ್ಷಣ ಮಠವನ್ನು ತ್ಯಜಿಸಬೇಕು. ಇಲ್ಲವಾದಲ್ಲಿ ನಾಡಿನಾದ್ಯಂತ ಇರುವ ಭಕ್ತರೊಂದಿಗೆ ಚರ್ಚಿಸಿಯೇ ಮುಂದಿನ ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಚುನಾವಣೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ ದಿಂಗಾಲೇಶ್ವರ ಶ್ರೀಗಳು ಒಂದು ಮಠದ ಪೀಠಾಧಿಪತಿಯಾಗಿ ಆ ಮಠದ ಪರಂಪರೆಯನ್ನು ಅರ್ಥ ಮಾಡಿಕೊಳ್ಳಬೇಕು. ಶ್ರೀಗಳು ಮೊದಲಿನಿಂದಲೂ ಕಾಂಗ್ರೆಸ್ ಪರವಾಗಿದ್ದಾರೆ. ಶ್ರೀಗಳ ಸ್ಪರ್ಧೆ ಕುರಿತು ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ಗಮನಿಸಿದಾಗ, ವಿನೋದ ಅಸೂಟಿ ಅವರ ಬದಲಾಗಿ ಶ್ರೀಗಳನ್ನೇ ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟವಾಗಿದೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಮುಖ್ಯಮಂತ್ರಿಗಳಿಗೆ ಮಾಲಾರ್ಪಣೆ ಮಾಡಲು ಬಂದ ವ್ಯಕ್ತಿ ರಿಯಾಜ್ ಲೋಡೆಡ್ ಗನ್ ಹಿಡಿದು ಬಂದಿದ್ದೇ ಇದಕ್ಕೆ ಉದಾಹರಣೆಯಾಗಿದೆ. ಒಂದು ಸಮುದಾಯವನ್ನು ತುಷ್ಟೀಕರಣ ಮಾಡುವ ರಾಜ್ಯದ ಈ ನಿಲುವಿನಿಂದಾಗಿ ರಾಜ್ಯದಲ್ಲಿ ಕಾನೂನು ಸುವಸ್ಯಸ್ಥೆಗೆ ಧಕ್ಕೆಯಾಗಿದೆ. ಸರಕಾರ ಈ ರೀತಿ ಸಣ್ಣ ಸಣ್ಣ ಘಟನೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ಆದರೆ ಮುಂದೆ ಇದರ ಪರಿಣಾಮ ಅತ್ಯಂತ ಗಂಭೀರವಾಗಿರುತ್ತದೆ ಎಂದು ಎಚ್ಚರಿಸಿದರು.


Spread the love

LEAVE A REPLY

Please enter your comment!
Please enter your name here