HomeGadag Newsಭಾರತ 2ನೇ ದೊಡ್ಡ ರಾಷ್ಟ್ರವಾಗಲಿ

ಭಾರತ 2ನೇ ದೊಡ್ಡ ರಾಷ್ಟ್ರವಾಗಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ದೇಶವು 100 ವರ್ಷಗಳ ಸ್ವಾತಂತ್ರ್ಯೋತ್ಸವ ಆಚರಿಸುವ 2047ರ ವೇಳೆಗೆ ಸ್ವಾವಲಂಬಿ, ಸದೃಢ ಹಾಗು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವದೇ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆದ `ವಿಕಸಿತ ಭಾರತದ ಅಮೃತಕಾಲ-ಮೋದಿ ಸರ್ಕಾರಕ್ಕೆ 11 ವರ್ಷ’ ಅಭಿಯಾನದ ಕಾರ್ಯಾಗಾರವನ್ನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ, ಸಾರಿಗೆ, ವಿಜ್ಞಾನ ಮತ್ತು ತಂತ್ರಜ್ಞಾನ, ಮೂಲಸೌಕರ್ಯ ಸೃಷ್ಟಿ, ಉದ್ಯೋಗ, ಮಹಿಳಾ ಅಭಿವೃದ್ಧಿ ಹೀಗೆ ಎಲ್ಲಾ ರಂಗಗಳಲ್ಲೂ ಭಾರತ ಸಾಧನೆಗೈದಿದ್ದು, ವಿಶ್ವದ 4ನೇ ಬೃಹತ್ ಆರ್ಥಿಕ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. 2047ರ ವೇಳೆಗೆ ದೇಶವು 35 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿ ಜಾಗತಿಕವಾಗಿ 2ನೇ ದೊಡ್ಡ ರಾಷ್ಟ್ರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕಕ್ಕೆ ಸಾವಿರಾರು ಕೋಟಿ ಮೌಲ್ಯದ ನೂರಕ್ಕೂ ಹೆಚ್ಚು ಯೋಜನೆಗಳನ್ನು ಕೇಂದ್ರವು ಒದಗಿಸಿದ್ದು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ನೀಡದೆ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಕಾರ್ಯಗತಗೊಳ್ಳದಂತೆ ನೀಚ ರಾಜಕೀಯವನ್ನು ಮಾಡುತ್ತಿದೆ ಎಂದು ಶಾಸಕ ಚಂದ್ರು ಲಮಾಣಿ ಆರೋಪಿಸಿದರು.

ಹಿರಿಯ ಧುರೀಣ ನಾಗರಾಜ ಕುಲಕರ್ಣಿ ಮಾತನಾಡಿ, ಬ್ರಿಟಿಷ್ ಕಾಲದ ಅಪ್ರಯೋಜಕ ಕಾನೂನು ಹಾಗು ನಿಯಮಗಳನ್ನು ರದ್ದುಗೊಳಿಸಿ ದೇಶದಲ್ಲಿ ಭ್ರಷ್ಟಾಚಾರ ರಹಿತ ಜನಪರ ಆಡಳಿತ ರೂಪಿಸಿದ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ಆರ್ಥಿಕ ಸ್ವಾವಲಂಬನೆ, ರಕ್ಷಣಾ ವ್ಯವಸ್ಥೆ, ವಿದೇಶಾಂಗ ನೀತಿಗಳ ಸುಧಾರಣೆ, ತಳ ಸಮುದಾಯಗಳ ಶ್ರೇಯೋಭಿವೃದ್ಧಿ ಮೂಲಕ ಸಮಗ್ರ ಭಾರತದ ಅಭಿವೃದ್ಧಿಗೆ ಮೋದಿ ಸರ್ಕಾರದ ಕೊಡುಗೆ ಅಪಾರ ಎಂದರು.

ವೇದಿಕೆಯಲ್ಲಿ ಜಿಲ್ಲಾ ಅಭಿಯಾನ ತಂಡದ ಭದ್ರೇಶ ಕುಸಲಾಪೂರ, ತಿಮ್ಮರಡ್ಡಿ ಮರಡ್ಡಿ, ಉಮೇಶ ಮಲ್ಲಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್.ಕೆ. ಚವಾಣ್, ಪಕ್ಕೀರೇಶ ರಟ್ಟೀಹಳ್ಳಿ ಉಪಸ್ಥಿತರಿದ್ದರು. ಮಂಡಲ ಅಧ್ಯಕ್ಷರಾದ ಸೋಮಶೇಖರ್ ಚರೇದ, ಅಂದಪ್ಪ ಹಾರುಗೇರಿ, ಹೇಮಗಿರೀಶ ಹಾವಿನಾಳ, ಸುನೀಲ ಮಹಾಂತಶೆಟ್ಟರ, ಮಹೇಶ ಮುಸ್ಕಿನಭಾವಿ, ಬೂದಪ್ಪ ಹಳ್ಳಿ, ಸುರೇಶ ಮರಳಪ್ಪನವರ ಮುಂತಾದವರಿದ್ದರು.

ಅಭಿಯಾನದ ಜಿಲ್ಲಾ ಸಂಚಾಲಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ ಮಾತಾನಾಡಿ, ಜೂನ್ 9ರಿಂದ ಪ್ರಾರಂಭವಾದ ಅಭಿಯಾನವು ಆಗಸ್ಟ್ 15ರವರೆಗೂ ನಡೆಯಲಿದೆ ಎಂದರಲ್ಲದೆ, ಪರಿಸರ ಅಭಿವೃದ್ಧಿ, ಸ್ವಚ್ಛತೆ, ಯೋಗ, ಆರೋಗ್ಯ ಸಂಬಂಧಿತ ಕಾರ್ಯಗಳು, ವಿಚಾರ ಸಂಕಿರಣಗಳು ಮುಂತಾದ ಜನಕಲ್ಯಾಣ ಕಾರ್ಯಕ್ರಮಗಳ ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪ್ರತಿ ನಾಗರಿಕರಿಗೂ ತಲುಪಿಸುವ ಕಾರ್ಯಸೂಚಿಯನ್ನು ಶಿಬಿರಾರ್ಥಿಗಳಿಗೆ ಪ್ರಸ್ತುತಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!