ಬೆಂಗಳೂರು:– ಸಿದ್ದರಾಮಯ್ಯ ವೈಯಕ್ತಿಕವಾಗಿ ಹೋರಾಡಲಿ, ಮುಖ್ಯಮಂತ್ರಿಯಾಗಿ ಅಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಹೇಳಿದ್ದಾರೆ.
ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಲೆಹರ್ ಸಿಂಗ್, ಮುಡಾ ಹಗರಣ ಸಿದ್ದರಾಮಯ್ಯ ಸೇರಿದಂತೆ ಅವರ ಪತ್ನಿ ಮತ್ತು ಕುಟುಂಬದ ವಿರುದ್ಧದ ಸಂಪೂರ್ಣವಾಗಿ ವೈಯಕ್ತಿಕ ಆರೋಪವಾಗಿದೆ.
ಇದು ಅವರ ಒಡೆತನದ ಖಾಸಗಿ ಭೂಮಿಗೆ ಸಂಬಂಧಿಸಿರುವುದು. ಹಾಗಾಗಿ ಅವರು ವೈಯಕ್ತಿಕವಾಗಿ ಹೋರಾಟ ಮಾಡಬೇಕೇ ಹೊರತು, ರಾಜ್ಯ ಸರ್ಕಾರದ ಮುಖ್ಯಮಂತ್ರಿ ಆಗಿ ಅಲ್ಲ. ಇದರ ವ್ಯತ್ಯಾಸ ಸಿಎಂ ಅವರಿಗೆ ತಿಳಿದಿದೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ತಮ್ಮ ಪತ್ನಿ ಹೆಸರಲ್ಲಿ ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಅಂತಾ ಬಿಜೆಪಿ ಆರೋಪಿಸಿತ್ತು.
ಅಷ್ಟೇ ಅಲ್ಲ ಬೆಂಗಳೂರಿನಿಂದ ಮೈಸೂರು ವರೆಗೂ ಪಾದಯಾತ್ರೆ ನಡೆಸಿತ್ತು. ಇದರ ನಡುವೆ ಟಿಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಖಾಸಗಿ ದೂರು ದಾಖಲಿಸಿದ್ದರು.