ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ.
Advertisement
ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಹ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದರು. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಶ್ರೀಮತಿಯವರನ್ನು ಎಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮರ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದರು.