• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅಂಗನವಾಡಿ ವ್ಯವಸ್ಥೆಯಲ್ಲಿ ಸುಧಾರಣೆಯಾಗಲಿ : ಸಿ.ಎಸ್. ಶಿವನಗೌಡರ

News Desk by News Desk
July 12, 2024
in Gadag News
Let the Anganwadi system be improved
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯ ಅಂಗನವಾಡಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಗುಣಮಟ್ಟದ ಪೌಷ್ಟಿಕಾಂಶಯುಕ್ತ, ಮಕ್ಕಳ ಅಭಿರುಚಿಗನುಸಾರ ಆಹಾರ ಒದಗಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಸಿ.ಎಸ್. ಶಿವನಗೌಡರ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಉಚ್ಛ ನ್ಯಾಯಾಲಯದ ಆದೇಶದನ್ವಯ ರಾಜ್ಯದಲ್ಲಿರುವ ಎಲ್ಲಾ ಅಂಗನವಾಡಿಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾಗಿರುವ ಹಾಗೂ ಅಪೌಷ್ಟಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿಯ ಅಧ್ಯಕ್ಷರೂ ಆದ ವೇಣುಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸದರಿ ಸಮಿತಿಯ ಅಧ್ಯಕ್ಷರು ಅಂಗನವಾಡಿಗಳ ಸ್ಥಿತಿಗತಿಯ ಬಗ್ಗೆ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗೆ ವಿ.ಸಿ. ಮೂಲಕ ಚರ್ಚಿಸಿ ಮೇಲಿಂದ ಮೇಲೆ ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ಕಳುಹಿಸಿಕೊಡುವಂತೆ ಸೂಚಿಸಿದ ಮೇರೆಗೆ, ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಈಗಾಗಲೇ ಗದಗ ಜಿಲ್ಲೆಯಲ್ಲಿನ ಪ್ರತಿ ತಾಲೂಕಿಗೆ ಸಂಬಂಧಿಸಿದಂತೆ ಕೆಲವೊಂದು ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲ ತಾಲೂಕುಗಳ ಆಯ್ದ ಅಂಗನವಾಡಿಗಳಿಗೆ ಭೇಟಿ ನೀಡಿ ಅಂಗನವಾಡಿಗಳ ಮೂಲ ಸೌಕರ್ಯಗಳನ್ನು ಪರಿಶೀಲಿಸಿದಾಗ ಕೆಲವು ನ್ಯೂನತೆಗಳು ಕಂಡು ಬಂದಿದ್ದು, ಸರಿಪಡಿಸುವಂತೆ ಸೂಚಿಸಲಾಗಿದೆ.

ಆದರೆ ಕೆಲವೊಂದು ಅಂಗನವಾಡಿಗಳಿಗೆ ಭೇಟಿ ಕೊಟ್ಟಾಗ ಸ್ಥಳಾವಕಾಶದ ಕೊರತೆ ಇರುವುದು ಮತ್ತು ಅಂಗನವಾಡಿಗಳ ಮುಂದೆಯೇ ಚರಂಡಿ ಇರುವುದರಿಂದ ಮಕ್ಕಳಿಗೆ ಬಹಳಷ್ಟು ತೊಂದರೆ ಆಗುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಸ್ವಚ್ಛತೆ ಬಗ್ಗೆ ಗಮನ ಹರಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಹಾಗೂ ಸಂಬಂಧಪಟ್ಟ ಮಹಿಳಾ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದರು.

ಮಕ್ಕಳಿಗೆ ಮುಂಜಾನೆ ಮಿಲೆಟ್ ಲಾಡು ಕೊಡುತ್ತಾರೆ ಹಾಗೂ 3 ದಿನ ಅನ್ನ-ಸಾಂಬಾರು, 3 ದಿನ ಉಪ್ಪಿಟ್ಟು ಹಾಗೂ ಮೊಟ್ಟೆಯನ್ನು ಕೊಡುತ್ತಾರೆ. ಇದನ್ನು ಬಹಳಷ್ಟು ಮಕ್ಕಳು ಇಷ್ಟ ಪಡುವುದಿಲ್ಲವೆಂದು ಮಕ್ಕಳ ಪೋಷಕರು ತಿಳಿಸಿದ್ದು, ಬೇರೆ ಬೇರೆ ರುಚಿಕರವಾದ ಆಹಾರ ನೀಡಲು ಹಾಗೂ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 1248 ಅಂಗನವಾಡಿ ಕೇಂದ್ರಗಳಿದ್ದು, 930 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. 220 ಬಾಡಿಗೆ ಕಟ್ಟಡದಲ್ಲಿ ಹಾಗೂ 98 ಅಂಗನವಾಡಿಗಳು ಶಾಲೆ, ಸಮುದಾಯ ಭವನಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ಒದಗಿಸಿದರು.

ಈ ಸಂದರ್ಭದಲ್ಲಿ ವಾರ್ತಾಧಿಕಾರಿ ವಸಂತ ಮಡ್ಲೂರ, ಬಸವರಾಜ ಕುಕನೂರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಹಾಜರಿದ್ದರು.

ಹೊಸದಾಗಿ ಅಂಗನವಾಡಿ ಕಟ್ಟುವಾಗ ದೊಡ್ಡ ಪ್ರಮಾಣದಲ್ಲಿ ಕಂಪೌಂಡ್ ಸಹಿತ ಅಂಗನವಾಡಿ ಕಟ್ಟಿದಲ್ಲಿ ಮಕ್ಕಳಿಗೆ ಅನುಕೂಲವಾಗುತ್ತದೆ. ಒಟ್ಟಾರೆ ಅಂಗನವಾಡಿಗಳು ಸುಧಾರಣೆ ಆಗಬೇಕು, ಅಂಗನವಾಡಿ ಸಮೀಪ ಇರುವ ಸರ್ಕಾರಿ ವೈದ್ಯರು ಅಂಗನವಾಡಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ಪರೀಕ್ಷಿಸಬೇಕು. ಸುಧಾರಣೆಗೆ ಕ್ರಮವಹಿಸಿ ಮಕ್ಕಳಿಗೆ ಒಳ್ಳೆಯ ವಾತಾವರಣ, ಶುದ್ಧ ಕುಡಿಯುವ ನೀರು, ಶುಚಿ-ರುಚಿಯಾದ ಊಟ ಕಲ್ಪಿಸಿ ಮಕ್ಕಳು ದಿನನಿತ್ಯ ಅಂಗನವಾಡಿಗೆ ಬರವಂತೆ ವಾತಾವರಣ ಸೃಷ್ಟಿಸಬೇಕು. ಅಪೌಷ್ಟಿಕತೆಯನ್ನು ತಡೆಯಲು ಕ್ರಮವಹಿಸಬೇಕು. ಮಕ್ಕಳೇ ಈ ದೇಶದ ಆಸ್ತಿ. ಆರೋಗ್ಯವಂತ, ಶಿಕ್ಷಣವಂತ ಮಕ್ಕಳನ್ನು ರೂಪಿಸುವಲ್ಲಿ ಮೂಲ ಬುನಾದಿ ಅಂಗನವಾಡಿ ಕೇಂದ್ರಗಳು. ಶಿಕ್ಷಕಿಯರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದರು.

Tags: District Legal Service Authority Member Secretary Justice C.S. Sivan GowdaGadaggadaganewsLatestNewsLet the Anganwadi system be improvedupdatenews
ShareSendShare
Previous Post

ಯೋಜನೆಗಳ ಸಮರ್ಪಕ ಅನುಷ್ಠಾನವಾಗಲಿ : ಭರತ್ ಎಸ್

Next Post

ಸರ್ಕಾರದ ನಡೆ ಖಂಡನಾರ್ಹ : ಡಾ. ಎಂ.ಎ. ಹಾದಿಮನಿ

News Desk

News Desk

Next Post
Petition submitted demanding fulfillment of demand of Karnataka government employees

ಸರ್ಕಾರದ ನಡೆ ಖಂಡನಾರ್ಹ : ಡಾ. ಎಂ.ಎ. ಹಾದಿಮನಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026
ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper