ಅನ್ಯ ಭಾಷೆಯ ವ್ಯಾಮೋಹ ತೊಲಗಲಿ : ಬಸವರಾಜ ಹೊರಟ್ಟಿ

0
Let the infatuation with foreign languages ​​go away
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ದಿನದಿಂದ ದಿನಕ್ಕೆ ಕನ್ನಡ ಶಾಲೆಗಳ ಸಂಖ್ಯೆ ಕಡಿಮೆ ಆಗುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಶಾಲೆಗಳ ಉಳಿವಿಗಾಗಿ ಮುಖ್ಯಮಂತ್ರಿಗಳು ಧೃಢ ಸಂಕಲ್ಪ ಮಾಡಬೇಕು. ಆ ಮೂಲಕ 69ನೇ ಕನ್ನಡ ರಾಜ್ಯೋತ್ಸವಕ್ಕೊಂದು ಅರ್ಥಪೂರ್ಣ ಮಹತ್ವ ಬಂದಂತಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿಯವರು ಅಭಿಪ್ರಾಯಪಟ್ಟಿದ್ದಾರೆ.
ಈ ತಿಂಗಳಲ್ಲದೇ ವರ್ಷದುದ್ದಕ್ಕೂ ಕನ್ನಡ ಭಾಷೆಯನ್ನು ಗಟ್ಟಿಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳು, ಸಾಹಿತ್ಯ ಪರಿಷತ್ತು, ಕನ್ನಡ ಪರ ಸಂಘಟನೆಗಳು ಕೆಲಸ ಮಾಡುತ್ತಾ ಬರುತ್ತಿರುವುದನ್ನು ಕಾಣುತ್ತಿದ್ದೇವೆ.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕನ್ನಡವೇ ಆಡಳಿತ ಭಾಷೆ ಆಗಬೇಕು. ಆದರೆ ಅನ್ಯ ಭಾಷೆಯ ವ್ಯಾಮೋಹದಿಂದಾಗಿ ಮಾತೃಭಾಷೆಗೆ ಪೆಟ್ಟು ಬೀಳುತ್ತಿದೆ. ದಿನದಿಂದ ದಿನಕ್ಕೆ ಆಂಗ್ಲ ಮಾಧ್ಯಮದ ಶಾಲೆಗಳ ಸಂಖ್ಯೆ ಹೆಚ್ಚುತ್ತಿರುವುದು, ಪಾಲಕರ ಆಂಗ್ಲ ವ್ಯಾಮೋಹದಿಂದ ಸ್ವಾತಂತ್ರö್ಯಪೂರ್ವದ ಕನ್ನಡ ಮಾಧ್ಯಮ ಶಾಲೆಗಳು ಶತಮಾನೋತ್ಸವವನ್ನು ಆಚರಿಸಿಕೊಂಡು ಈಗ ಅಳಿವಿನ ಅಂಚಿನಲ್ಲಿ ಬಂದು ನಿಂತಿರುವುದು ವಿಷಾದದ ಸಂಗತಿ. ಸರ್ಕಾರ ಕನ್ನಡ ಶಾಲೆಗಳ ಅಳಿವು ಉಳಿವಿಗಾಗಿ ಎಷ್ಟೇ ಯೋಜನೆಗಳನ್ನು ತಂದರೂ ಮಾತೃ ಭಾಷೆಯ ಶಾಲೆಗಳನ್ನು ಉಳಿಸಿಕೊಳ್ಳಲು ಪರದಾಡಬೇಕಾಗಿದೆ. ಈ ಸಂಗತಿಯತ್ತ ಸರಕಾರ ವಿಶೇಷ ಗಮನಹರಿಸಬೇಕಿದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿದಂತಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿಯವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಕನ್ನಡ ಭಾಷೆಯನ್ನು ಸದೃಢಗೊಳಿಸಲು ಹಾಗೂ ನಾಡಿನಾದ್ಯಂತ ಕಟ್ಟಲು ಅಳಿವಿನ ಅಂಚಿನಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸಿದಾಗ ಮಾತ್ರ ಸಾಧ್ಯ. ಕನ್ನಡ ಮಾಧ್ಯಮದ ಶಾಲೆಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕನ್ನಡ ಕಟ್ಟುವ ಕೆಲಸದಲ್ಲಿ ಹಿಂದೆ ಬಿದ್ದಿಲ್ಲ. ಸರಕಾರ ಇವರ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. 1995ರಿಂದ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕರು ಕಳೆದ ಎರಡೂವರೆ ದಶಕಗಳಿಂದ ತಮ್ಮ ಬದುಕನ್ನು ಪಣಕ್ಕಿಟ್ಟು ಕನ್ನಡ ಶಾಲೆಯ ಉಳಿವಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆ ಶಿಕ್ಷಕರು ಹಲವಾರು ವರ್ಷಗಳಿಂದ ತಮ್ಮ ಜೀವನದ ಭದ್ರತೆಗಾಗಿ ಕನ್ನಡ ಶಾಲೆಗಳಿಗೆ ಅನುದಾನ ನೀಡಿ ಎಂದು ಹಲವಾರು ಬಾರಿ ಬೀದಿಗಿಳಿದು ಹೋರಾಟ ಮಾಡುತ್ತಾ ಬಂದಿದ್ದಾರೆ. ಇಂತಹ ಶಾಲೆಗಳಿಂದಲೇ ಮಾತೃಭಾಷೆ ಇಂದಿಗೂ ಜೀವಂತವಾಗಿದೆ ಎಂದು ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

Spread the love
Advertisement

LEAVE A REPLY

Please enter your comment!
Please enter your name here