ಕನ್ನಡದ ಕಂಪು ಜಿಲ್ಲೆಯೆಲ್ಲೆಡೆ ಪಸರಿಸಲಿ: ಸಚಿವ ಎಚ್.ಕೆ. ಪಾಟೀಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಸಾಹಿತ್ಯ, ಸಂಗೀತ, ಸಂಸ್ಕೃತಿಗಳು ತನ್ನದೇ ಆದ ಐತಿಹಾಸಿಕ ಪಂರಂಪರೆ ಹೊಂದಿದೆ. ಈ ಐತಿಹಾಸಿಕ ಇತಿಹಾಸ ಪರಂಪರೆ ಜಿಲ್ಲೆಯ ಅಧಿಕ ಸಾರ್ವಜನಿಕರಿಗೆ ತಲುಪಲಿ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

Advertisement

ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಚನವನ್ನು ಜಿಲ್ಲಾಡಳಿತ ಭವನದಲ್ಲಿ ರವಿವಾರ ಬಿಡುಗಡೆ ಮಾಡಿ ಸಚಿವರು ಮಾತನಾಡಿ, ಜನವರಿ 20, 21ರಂದು ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಜರುಗುವ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಲಿ. ಕನ್ನಡದ ಕಂಪು ಜಿಲ್ಲೆಯೆಲ್ಲೆಡೆ ಪಸರಿಸಲಿ ಎಂದರು.

ಗದಗ ರಾಮಕೃಷ್ಣ ಆಶ್ರಮದ ಜಗನ್ನಾಥಾನಂದ ಶ್ರೀಗಳು, ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ್ ಮಂದಾಲಿ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವಾನಂದ ಗಿಡ್ನಂದಿ, ಕಿಶೋರ್ ಬಾಬು ನಾಗರಕಟ್ಟಿ, ಕೋಶಾಧ್ಯಕ್ಷ ಡಿ.ಎಸ್. ಬಾಪುರಿ, ದತ್ತ ಪ್ರಸನ್ನ ಪಾಟೀಲ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್‌ಪಿ ವಿದ್ಯಾನಂದ ನಾಯ್ಕ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.

ಗದಗ ಜಿಲ್ಲೆಯ ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ನಾಡಿನ ಜಿಲ್ಲೆಯ ಸಾಹಿತ್ಯ-ಸಂಸ್ಕೃತಿಯ ಪರಿಚಯ ಆಗಬೇಕು. ಈ ಮೂಲಕ ನಮ್ಮ ಗದಗ ಜಿಲ್ಲೆಯ ಐತಿಹಾಸಿಕ ಪರಂಪರೆಯ ಅರಿವು ಮೂಡಬೇಕು. ಒಟ್ಟಾರೆ ಸಾಹಿತ್ಯ ಸಮ್ಮೇಳನದ ಮೂಲ ಆಶಯ ಇಡೇರಬೇಕು ಎಂದು ಡಾ. ಎಚ್.ಕೆ. ಪಾಟೀಲ ಹೇಳಿದರು.


Spread the love

LEAVE A REPLY

Please enter your comment!
Please enter your name here