ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಇದೀಗ ರೆಗ್ಯಲರ್ ಬೇಲ್ ಮೇಲೆ ಹೊರ ಬಂದಿದ್ದಾರೆ. ಜಾಮೀನಿನ ಮೂಲಕ ಹೊರ ಬಂದಿರುವ ದರ್ಶನ್ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಮೈಸರೂರಿನ ತೋಟದ ಮನೆಯಲ್ಲಿ ಪತ್ನಿ ವಿಜಯಲಕ್ಷ್ಮಿ ಜೊತೆಗೆ. ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡಿರುವ ಫೋಟೋವನ್ನು ದರ್ಶನ್ ಶೇರ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದು ದರ್ಶನ್ ಬರೆದುಕೊಂಡಿದ್ದಾರೆ.
2024 ವರ್ಷ ದರ್ಶನ್ ಅವರ ಪಾಲಿಗೆ ತುಂಬ ಕಷ್ಟಕರ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಏಳೂ ತಿಂಗಳ ಕಾಲ ಜೈಲು ವಾಸ ಅನುಭವಿಸಿ ಹೊರ ಬಂದಿರುವ ದರ್ಶನ್ ಗೆ ಈ ವರ್ಷ ಎಲ್ಲವೂ ಒಳ್ಳೆಯದಾಗಲಿ ಎಂದು ಅಭಿಮಾನಿಗಳು ಶುಭ ಹಾರೈಸಿದ್ದಾರೆ.