ನೋಂದಣಿ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಗಳಲ್ಲಿ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಸಾಗಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬುಧವಾರ ಜರುಗಿದ ಜನನ ಮತ್ತು ಮರಣ ನೋಂದಣಿ ಪದ್ಧತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ಜಿಲ್ಲೆಯಲ್ಲಿ ಏಪ್ರಿಲ್ 2025ರಿಂದ ಜೂನ್ 2025ರವರೆಗೆ 2505 ಜನನಗಳು ನಿಗದಿತ ಸಮಯದಲ್ಲಿ ನೋಂದಣಿಯಾಗಿದ್ದು, ಶೇ 55.38ರಷ್ಟು ಹಾಗೂ 1925 ಮರಣಗಳು ನಿಗದಿತ ಸಮಯದಲ್ಲಿಯೇ ನೋಂದಣಿಯಾಗಿ ಶೇ.78ರಷ್ಟು ಪ್ರಗತಿ ಸಾಧಿಸಲಾಗಿದೆ. ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಎಂದ ಅವರು, 2025ರಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜರುಗಿಸಿದ ವಿವರ ಹಾಗೂ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರು, ಜಂಟಿ ಕೃಷ ನಿರ್ದೇಶಕಿ ತಾರಾಮಣಿ ಜಿ.ಎಚ್, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ.ರೇಖಾ ಸೋನಾವಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಡಿಡಿಎಲ್‌ಆರ್ ರುದ್ರಣ್ಣಗೌಡ ಜಿ.ಜೆ. ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಸೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಸಹಿಯನ್ನು ಸಂಗ್ರಹಿಸಬೇಕು ಮತ್ತು ಅರ್ಜಿದಾರರ ಶುಲ್ಕವನ್ನು ನಿಯಮಿತವಾಗಿ ಸರಕಾರಕ್ಕೆ ಜಮೆ ಮಾಡಬೇಕು. ನೋಂದಣಿ ಪ್ರಮಾಣ ಪತ್ರದಲ್ಲಿ ನೋಂದಣಾಧಿಕಾರಿಗಳ ರುಜು ಕಡ್ಡಾಯವಾಗಿರಬೇಕು ಹಾಗೂ ತಾಲೂಕ ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಡಾಯವಾಗಿ ಜರುಗಿಬೇಕು ಎಂದು ಡಿಸಿ ಸೂಚಿಸಿದರು.


Spread the love

LEAVE A REPLY

Please enter your comment!
Please enter your name here