ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸರಕಾರಗಳು ಸಾಕಷ್ಟು ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುತ್ತಿವೆ. ವಿದ್ಯಾರ್ಥಿಗಳಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ವಿದ್ಯಾರ್ಥಿಗಳಿಗೆ ತಲುಪಬೇಕಾದ ಎಲ್ಲಾ ಸೌಲಭ್ಯಗಳನ್ನು ತಪ್ಪದೇ ತಲುಪಿಸಲು ಶಿಕ್ಷಕರು ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ್ ತಿಳಿಸಿದರು.
ಅವರು ಮಂಗಳವಾರ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಭವನದಲ್ಲಿ ಲಕ್ಮೇಶ್ವರ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಇಸಿಓ ಹಾಗೂ ಬಿಆರ್‌ಪಿಗಳು ಇಲಾಖೆಗೆ ಸಂಬಂಧಪಟ್ಟ ಆಧಾರ್ ತಿದ್ದುಪಡಿ, ಅಪಾರ ನೊಂದಣಿ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಮ್.ಎಸ್. ಹಿರೇಮಠ, ಕಾರ್ಯದರ್ಶಿ ಚಂದ್ರಕಾಂತ ನೇಕಾರ, ಎಲ್.ಎ. ನಂದೆಣ್ಣವರ, ಬಿ.ಬಿ. ಯತ್ನಳ್ಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಎಮ್.ಡಿ. ವಾರದ, ನಿರ್ದೇಶಕರಾದ ಬಿ.ಎಮ್. ಯರಗುಪ್ಪಿ, ಆಯ್.ಎಸ್. ಮೆಡ್ಲೇರಿ, ಉಮೇಶ ಹುಚ್ಚಯ್ಯಮಠ, ಹರೀಶ್ ಸೇಂದ್ರಗಯಾ, ಆಯ್.ಬಿ. ಜಕ್ಕನಗೌಡರ, ನಿಕಟಪೂರ್ವ ಅಧ್ಯಕ್ಷ ಡಿ.ಎಚ್. ಪಾಟೀಲ ಸೇರಿದಂತೆ ಲಕ್ಷೆö್ಮÃಶ್ವರ ತಾಲೂಕಿನ ಎಲ್ಲಾ ಸಿಆರ್‌ಪಿ, ಬಿಆರ್‌ಪಿ, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಸಹಕಾರ ಇರಬೇಕು. ಸರಕಾರದ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಅವರ ಪಾಲಕರಿಗೆ ತಿಳಿಸಿ ಹೇಳುವದ ಜೊತೆಗೆ ಪ್ರತಿಯೊಬ್ಬರಿಗೂ ಅವುಗಳು ತಲುಪುವಂತೆ ಮಾಡುವದು ಅತಿ ಮುಖ್ಯವಾಗಿದೆ. ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳುವದು ಅವಶ್ಯ ಎನ್ನುವದನ್ನು ಶಿಕ್ಷಕರು ಅರಿತುಕೊಳ್ಳಬೇಕು. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಉತ್ತಮ ಅಡಿಪಾಯ ದೊರೆತಲ್ಲಿ ಅವರ ಭವಿಷ್ಯ ಉತ್ತಮವಾಗಿ ರೂಪಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ್ ಹೇಳಿದರು.