ಸಾಂವಿಧಾನಿಕ ಮೌಲ್ಯಗಳ ಅನುಷ್ಠಾನವಿರಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕೇವಲ ಗಣರಾಜ್ಯೋತ್ಸವ ಆಚರಿಸುವುದಕ್ಕೆ ಮಾತ್ರ ಭಾರತೀಯ ಮನಸುಗಳು ಸೀಮಿತವಾಗಿರದೇ ಸಾಂವಿಧಾನಿಕ ಮೌಲ್ಯಗಳ ಅರಿವನ್ನು ಪಡೆದು ನಿಜಜೀವನದಲ್ಲಿ ಅವುಗಳನ್ನು ಅನುಷ್ಠಾನಗೊಳಿಸಿಕೊಂಡಾಗ ಮಾತ್ರ ಆಚರಣೆಗೆ ಮಹತ್ವ ಬರುತ್ತದೆ ಎಂದು ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ ಅಭಿಪ್ರಾಯಪಟ್ಟರು.

Advertisement

ನಗರದ ಸನ್ಮಾರ್ಗ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಯುವ ಜನಾಂಗ ಸಂವಿಧಾನದ ತತ್ವಗಳನ್ನು ತಿಳಿಯಬೇಕಾಗಿರುವುದು ಹಿಂದೆಂದಿಗಿಂತಲೂ ಇಂದು ಅಗತ್ಯ ಹಾಗೂ ಅನಿವಾರ್ಯವಾಗಿದೆ ಎಂದರು.

ಧ್ವಜಾರೋಹಣ ನೆರವೇರಿಸಿ ಪ್ರೊ. ಸಂಗಿತಾ ಬೀಳಗಿ ಮಾತನಾಡಿ, ಎಲ್ಲಾ ಭಾರತೀಯರಲ್ಲಿ ಸಂವಿಧಾನದ ಕುರಿತು ಗೌರವ, ಅಭಿಮಾನಗಳಿರಲಿ ಎಂದರು.

ಸಂಸ್ಥೆಯ ಸದಸ್ಯ ಪ್ರೊ. ರೋಹಿತ್ ಒಡೆಯರ್, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ರಾಹುಲ್ ಒಡೆಯರ್, ಪ್ರೊ. ಪುನೀತ ದೇಶಪಾಂಡೆ, ಪ್ರೊ. ಸೈಯ್ಯದ್ ಮತಿನ್ ಮುಲ್ಲಾ, ಬೋಧಕ-ಬೋಧಕೇತರ ಸಿಬಂ್ಬದಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here