• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಿರಲಿ : ವೈಶಾಲಿ ಎಂ.ಎಲ್

News Desk by News Desk
April 13, 2024
in Gadag News
meeting
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸ್ಪಷ್ಟ ನಿರ್ದೇಶನ ನೀಡಿದರು.

ಗದಗ ಜಿಲ್ಲೆಯಲ್ಲಿ ಕುಡಿಯುವ ನೀರು ನಿರ್ವಹಣೆ, ಮೇವಿನ ಪೂರೈಕೆ, ಬಿಸಿಗಾಳಿ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುಂಗಭದ್ರಾ ಮತ್ತು ಮಲಪ್ರಭಾ ನದಿ ಮೂಲಗಳಿಂದ, ಟ್ಯಾಂಕರ್ ಮೂಲಕ, ಬೋರ್‌ವೆಲ್ ಹೀಗೆ ವಿವಿಧ ಮೂಲಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಈ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿ, ಕುಡಿಯುವ ನೀರು ಸಂಗ್ರಹ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸುದೀರ್ಫವಾಗಿ ಚರ್ಚಿಸಿದರು.

ಕುಡಿಯುವ ನೀರು ಪೂರೈಕೆ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಕುಡಿಯುವ ನೀರು ಸರಬರಾಜಿನಲ್ಲಿ ಸಾರ್ವಜನಿಕರಿಂದ ದೂರು ಬಾರದಂತೆ ಗಮನ ಹರಿಸುವುದು ಅಧಿಕಾರಿಗಳ ಪ್ರಥಮ ಆದ್ಯತೆ ಆಗಬೇಕು. ಕುಡಿಯುವ ನೀರಿನ ಪೂರೈಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಾಕೀತು ಮಾಡಿದರು.

ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರರು, ತಾಲೂಕು ಪಂಚಾಯತ್ ಇ.ಒಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಹಾಗೂ ಪಿಡಿಒಗಳ ಜೊತೆ ಸಭೆ ನಡೆಸಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸೂಚಿಸಿದರು.

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಸಂಬಂಧ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಕುಡಿಯುವ ನೀರು ಪೂರೈಕೆ ಸಂದರ್ಭದಲ್ಲಿ ಛಾಯಾಚಿತ್ರ ಸಹಿತ ಮಾಹಿತಿ ಒದಗಿಸಬೇಕು. ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ವ್ಯತ್ಯಯ ಆಗಬಾರದು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮೇವು ಪೂರೈಕೆಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ಜಿ.ಪಂ ಸಿಇಒ ಎಸ್.ಭರತ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಹಲವು ಕಡೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ತಾ.ಪಂ ಇಒಗಳು ಕುಡಿಯುವ ನೀರು ಪೂರೈಕೆ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.

ತಹಸೀಲ್ದಾರರು, ತಾ.ಪಂ ಇ.ಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನೀರಾವರಿ ಇಂಜನಿಯರ್‌ಗಳು ತುಂಗಭದ್ರ ಹಾಗೂ ಮಲಪ್ರಭ ನದಿಗಳಲ್ಲಿನ ನೀರು ಸಂಗ್ರಹ ಬಗ್ಗೆ ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಉಪ ವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ನಗರಸಭೆ ಪೌರಾಯುಕ್ತ ಪ್ರಶಾಂತ್ ವರಗಪ್ಪನವರ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಕುಡಿಯುವ ನೀರು ಪೂರೈಕೆಯಲ್ಲಿನ ನಿರ್ವಹಣೆಯನ್ನು ಸರಿಯಾಗಿ ನಿಭಾಯಿಸಬೇಕು. ಪೈಪ್‌ಲೈನ್‌ಗಳನ್ನು ಆಗಾಗ ಪರಿಶೀಲಿಸಬೇಕು. ಕುಡಿಯುವ ನೀರು ಪೂರೈಸುವುದರ ಜೊತೆಗೆ ಗುಣಮಟ್ಟದ ಬಗ್ಗೆಯೂ ಪ್ರತಿನಿತ್ಯ ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಉದಾಸೀನ ತೋರಬಾರದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

Tags: District Collector Vaishali M.LDistrict Disaster Management AuthorityDrinking water supplyG. Pm CEO S. BharatTungabhadra and Malaprabha river
ShareSendShare
Previous Post

ದ್ಯಾಮವ್ವ ದೇವಿಯ ಉತ್ಸವಕ್ಕೆ ಸಕಲ ಸಿದ್ಧತೆ

Next Post

ಕಡ್ಡಾಯ ಮತದಾನದ ಜಾಗೃತಿ ಮೂಡಿಸಿ : ಪ್ರೊ. ರಾಜೇಶ ಕುಲಕರ್ಣಿ

News Desk

News Desk

Next Post
sanmarga

ಕಡ್ಡಾಯ ಮತದಾನದ ಜಾಗೃತಿ ಮೂಡಿಸಿ : ಪ್ರೊ. ರಾಜೇಶ ಕುಲಕರ್ಣಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ! ಶಾಸ್ತ್ರೋಕ್ತವಾಗಿ ತೆರೆದ ದೇವಿಯ ಗರ್ಭಗುಡಿ ಬಾಗಿಲು, ಭಕ್ತರಲ್ಲಿ ಸಂಭ್ರಮ

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ! ಶಾಸ್ತ್ರೋಕ್ತವಾಗಿ ತೆರೆದ ದೇವಿಯ ಗರ್ಭಗುಡಿ ಬಾಗಿಲು, ಭಕ್ತರಲ್ಲಿ ಸಂಭ್ರಮ

October 29, 2026
ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಚುರುಕು: SIT ಮುಂದೆ ಹಾಜರಾದ ಅಂದಿನ ಪೊಲೀಸ್ ಅಧಿಕಾರಿಗಳು

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಚುರುಕು: SIT ಮುಂದೆ ಹಾಜರಾದ ಅಂದಿನ ಪೊಲೀಸ್ ಅಧಿಕಾರಿಗಳು

October 29, 2026
ಧಾರವಾಡ SDA ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು: ₹4 ಕೋಟಿ ನೌಕರಿ ಹಗರಣದ ಸುಳಿವು, ಮೃತನ ಬ್ಯಾಗ್ ನಲ್ಲಿ 70 ಚೆಕ್ʼಗಳು, ಡೆತ್ ನೋಟ್ ಪತ್ತೆ!

ಧಾರವಾಡ SDA ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು: ₹4 ಕೋಟಿ ನೌಕರಿ ಹಗರಣದ ಸುಳಿವು, ಮೃತನ ಬ್ಯಾಗ್ ನಲ್ಲಿ 70 ಚೆಕ್ʼಗಳು, ಡೆತ್ ನೋಟ್ ಪತ್ತೆ!

October 29, 2026
KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಒಂದೇ ವರ್ಷದಲ್ಲಿ ₹10 ಕೋಟಿಗೂ ಅಧಿಕ ವ್ಯವಹಾರ ನಡೆಸಿದ ಶಿವಶಂಕರಪ್ಪ?

KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಒಂದೇ ವರ್ಷದಲ್ಲಿ ₹10 ಕೋಟಿಗೂ ಅಧಿಕ ವ್ಯವಹಾರ ನಡೆಸಿದ ಶಿವಶಂಕರಪ್ಪ?

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ! ಶಾಸ್ತ್ರೋಕ್ತವಾಗಿ ತೆರೆದ ದೇವಿಯ ಗರ್ಭಗುಡಿ ಬಾಗಿಲು, ಭಕ್ತರಲ್ಲಿ ಸಂಭ್ರಮ

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ! ಶಾಸ್ತ್ರೋಕ್ತವಾಗಿ ತೆರೆದ ದೇವಿಯ ಗರ್ಭಗುಡಿ ಬಾಗಿಲು, ಭಕ್ತರಲ್ಲಿ ಸಂಭ್ರಮ

October 29, 2026
ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಚುರುಕು: SIT ಮುಂದೆ ಹಾಜರಾದ ಅಂದಿನ ಪೊಲೀಸ್ ಅಧಿಕಾರಿಗಳು

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಚುರುಕು: SIT ಮುಂದೆ ಹಾಜರಾದ ಅಂದಿನ ಪೊಲೀಸ್ ಅಧಿಕಾರಿಗಳು

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper