ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ನವಭಾರತದ ಭವಿತವ್ಯವನ್ನು ಮತ್ತಷ್ಟು ಬಲಿಷ್ಠ, ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ದೇಶದ ಸರ್ವಧರ್ಮ ಗ್ರಂಥವಾದ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ತಮ್ಮ ಪಾಲಿನ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು ಎಂದು ಎಂದು ತಹಸೀಲ್ದಾರ ವಾಸುದೇವ ಎಂ.ಸ್ವಾಮಿ ಹೇಳಿದರು.
ಅವರು ಭಾನುವಾರ ಪಟ್ಟಣದ ಉಮಾವಿದ್ಯಾಲಯ ಹೈಸ್ಕೂಲ್ ಮೈದಾನದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಾರ್ವಭೌಮ, ಜಾತ್ಯಾತೀತ, ಭ್ರಾತೃತ್ವ, ಸಮಾನತೆಯನ್ನೊಳಗೊಂಡ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ಭಾರತದ ಅಭಿವೃದ್ಧಿಗೆ ನಾವೆಲ್ಲ ದೃಡ ಸಂಕಲ್ಪದಿಂದ ಮುನ್ನಡೆಯಬೇಕಾಗಿದೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ಸಾಂಸ್ಕೃತಿಕ ಪರಂಪರೆಯ ಭಾರತವೀಗ ಶಿಕ್ಷಣ, ಆರೋಗ್ಯ, ಕೃಷಿ, ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಆದಾಗ್ಯೂ ಹೆಚ್ಚುತ್ತಿರುವ ಜನಸಂಖ್ಯೆ, ಅನಕ್ಷರತೆ, ಸ್ವಚ್ಛತೆ, ಆರೋಗ್ಯ ಸಮಸ್ಯೆಗಳಿಂದ ಹಿನ್ನಡೆ ಅನುಭವಿಸುತ್ತಿದೆ. ವಿವಿಧತೆ ಹೊಂದಿರುವ ದೇಶದಲ್ಲಿ ಸಮಾನತೆ, ಸಾರ್ವಭೌಮತ್ವ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭಾವನೆಯನ್ನು ತರುವ ಉದ್ದೇಶದಿಂದ ಅಂಗೀಕಾರವಾದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಆದರ್ಶ ಗಣರಾಜ್ಯದ ಸಂಕಲ್ಪದೊಂದಿಗೆ ನಡೆಯೋಣ ಎಂದರು.
ತಾ.ಪಂ ಇಓ ಕೃಷ್ಣಪ್ಪ ಧರ್ಮರ ಮಾತನಾಡಿ, ವಿವಿಧತೆ ಹೊಂದಿರುವ ದೇಶದಲ್ಲಿ ಸಮಾನತೆ, ಸಾರ್ವಭೌಮತ್ವ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭಾವನೆಯನ್ನು ತರುವ ಉದ್ದೇಶದಿಂದ ಅಂಗೀಕಾರವಾದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಆದರ್ಶ ಗಣರಾಜ್ಯದ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸೋಣ ಎಂದರು.
ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಡಾ. ಶಂಭು ಬಳಿಗಾರ, ರಾಷ್ಟಿçÃಯ ಕುಸ್ತಿಯಲ್ಲಿ ಚಿನ್ನದ ಪದಕ ಪಡೆದ ಪಟ್ಟಣದ ಜಯಶ್ರೀ ಗುಡಗುಟಿ ಸೇರಿದಂತೆ ಕಂದಾಯ, ಪೊಲೀಸ್, ಹೆಸ್ಕಾಂ ವಿವಿಧ ಇಲಾಖೆಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ತಾಲೂಕಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಚಂದನ ಶಾಲೆಯ ವಿದ್ಯಾರ್ಥಿಗಳು ಬ್ಯಾಂಡ್ ಮೂಲಕ ರಾಷ್ಟçಗೀತೆ ನುಡಿಸಿದರು. ಎಸ್‌ಟಿಪಿಎಂಬಿ ಪ್ರಾಥಮಿಕ ಶಾಲೆಯ ಮಕ್ಕಳು ರಾಷ್ಟçಗೀತೆ, ನಾಡಗೀತೆ ಹಾಡಿದರು. ಗಣರಾಜ್ಯೋತ್ಸವ ಅಂಗವಾಗಿ ಶಾಲಾ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿ ನೀಡಲಾಯಿತು.
ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಪಿಎಸ್‌ಐ ನಾಗರಾಜ ಗಡದ, ಹೆಸ್ಕಾಂ ಅಧಿಕಾರಿ ಆಂಜನೇಯಪ್ಪ, ಉಪನೋಂದಣಾಧಿಕಾರಿ ಎಸ್.ಕೆ. ಜಲರಡ್ಡಿ, ಎಪಿಎಂಸಿ ಕಾರ್ಯದರ್ಶಿ ರುದ್ರಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಯಲ್ಲಮ್ಮ ದುರಗಣ್ಣವರ, ಪಿಎಸ್‌ಐ ಟಿ.ಕೆ. ರಾಥೋಡ, ಕೃಷಿಕ ಸಮಾಜದ ತಾಲೂಕ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ, ಶಿವಾನಂದ ಬಾನಿ, ಪ್ರಶಾಂತ ಕಿಮಾಯಿ, ಕಂದಾಯ ನಿರೀಕ್ಷಕ ಎಂ.ಎ. ನದಾಫ್, ಬಿಎಸ್ ಹಿರೇಮಠ ಸೇರಿ ಪುರಸಭೆ ಸದಸ್ಯರು, ವಿವಿಧ ಶಾಲಾ ಕಾಲೇಜುಗಳು, ಉಪನ್ಯಾಸಕರು, ಶಿಕ್ಷಕರು ಸಿಬ್ಬಂದಿಗಳು ಹಾಜರಿದ್ದರು.
ಬಿಆರ್‌ಪಿ ಈಶ್ವರ ಮೆಡ್ಲೇರಿ, ಸಿಆರ್‌ಪಿಗಳಾದ ಉಮೇಶ ನೇಕಾರ, ಸತೀಶ ಬೋಮಲೆ, ಎನ್.ಎ. ಮುಲ್ಲಾ ನಿರೂಪಿಸಿದರು. ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಸ್ವಾಗತಿಸಿದರು. ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ವೇಷಭೂಷಣ, ದೇಶಭಕ್ತಿಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಗಳು ಜರುಗಿದವು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲೆಗಳ ಶಿಕ್ಷಕವೃಂದ ಪಾಲ್ಗೊಂಡಿದ್ದರು. ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಸ್ವಾಗತಿಸಿದರು. ಬಿಆರ್‌ಪಿ ಈಶ್ವರ ಮೆಡ್ಲೇರಿ, ಸಿಆರ್‌ಪಿ ಸತೀಶ ಬೋಮಲೆ, ಉಮೇಶ ನೇಕಾರ, ಎನ್.ಎ ಮುಲ್ಲಾ ನಿರ್ವಹಿಸಿದರು.
ದ್ವಜಾರೋಹಣದ ಬಳಿಕ ಮೈದಾನದಲ್ಲಿ ಸೇರಿದ್ದ ಪೊಲೀಸ್, ಎನ್‌ಸಿಸಿ ಹಾಗೂ ಪಟ್ಟಣದ ಹತ್ತಾರು ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಪಿಎಸ್‌ಐ ನಾಗರಾಜ ಗಡದ ಪಥಸಂಚಲನದ ನೆರವೇರಿಸಿದರು. ಪಥ ಸಂಚಲನದಲ್ಲಿ ಬಿಸಿಎನ್ ಹೈಸ್ಕೂಲ್ (ಪ್ರಥಮ), ದಿ ಯೂನಿಕ್ ಶಾಲೆ(ದ್ವಿತೀಯ) ಎಸ್‌ಟಿಪಿಎಂಬಿ ಆಂಗ್ಲ ಮಾಧ್ಯಮ (ತೃತೀಯ) ಸ್ಥಾನ ಪಡೆಯಿತು. ಈ ವೇಳೆ ಬಿ.ಡಿ. ತಟ್ಟಿ ಶಾಲೆಯ ವಿಕಲಚೇತನ ವಿದ್ಯಾರ್ಥಿಗಳು ಸೇರಿ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಶಂಭು ಬಳಿಗಾರ, ಗಣರಾಜ್ಯೋತ್ಸವ ದೇಶದ ಹೆಮ್ಮೆ ಮತ್ತು ಪ್ರಗತಿಯ ದ್ಯೋತಕವಾಗಿದ್ದು, ಸ್ವಾಭಿಮಾನದಿಂದ ಬದುಕುವುದನ್ನು ಕಲಿಸಿರುವ ಭಾರತ ಮಾತೆಯ ಮಕ್ಕಳಾದ ನಾವೆಲ್ಲ ದೇಶದ ಅಭಿವೃದ್ಧಿಗೆ ಕೈಜೋಡಿಸೋಣ. ಶಿಕ್ಷಕರು, ಪಾಲಕರು ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ, ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡೋಣ ಎಂದರು.