ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಂಚಿಕೊಂಡಿರುವ ಇನ್‌ಸ್ಟಾಗ್ರಾಂ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಪರೂಪವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗುವ ವಿಜಯಲಕ್ಷ್ಮಿ ಅವರ ಈ ಪೋಸ್ಟ್ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ “ಪಡೆದುಕೊಂಡ ಮೇಲೆ, ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ… ಅದು ವಸ್ತುವಾಗಲಿ, ವ್ಯಕ್ತಿಯಾಗಲಿ” ಎಂಬ ಸಂದೇಶವನ್ನು ಹಂಚಿಕೊಂಡಿದ್ದಾರೆ. ಯಾವುದೇ ವ್ಯಕ್ತಿಯನ್ನು ಟ್ಯಾಗ್ ಮಾಡದಿದ್ದರೂ, ಈ ಪೋಸ್ಟ್ ಯಾರನ್ನೋ ಉದ್ದೇಶಿಸಿ ಪರೋಕ್ಷ ಸಂದೇಶ ರವಾನಿಸಲಾಗಿದೆ ಎಂಬ ಚರ್ಚೆ ಜೋರಾಗಿದೆ.
ದರ್ಶನ್ ಜೈಲಿನಲ್ಲಿರುವ ಅವಧಿಯಲ್ಲಿ ಕುಟುಂಬದ ಜವಾಬ್ದಾರಿಯನ್ನು ವಿಜಯಲಕ್ಷ್ಮಿಯೇ ನಿರ್ವಹಿಸುತ್ತಿದ್ದಾರೆ. ಇದೇ ವೇಳೆ ದರ್ಶನ್ ಅವರ ಆಪ್ತ ವಲಯದಲ್ಲಿದ್ದ ಕೆಲವರೊಂದಿಗೆ ಅಂತರ ಉಂಟಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಕೆಲವು ವರದಿಗಳ ಪ್ರಕಾರ, ದರ್ಶನ್ ಕುಟುಂಬಕ್ಕೆ ಆಪ್ತರಾಗಿದ್ದ ನಟ ಧನ್ವೀರ್ ಗೌಡ ಅವರೊಂದಿಗೆ ಸಣ್ಣ ಮನಸ್ತಾಪ ಉಂಟಾಗಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿಲ್ಲ. ವಿಜಯಲಕ್ಷ್ಮಿ ಅವರ ಪೋಸ್ಟ್ ಈ ಬೆಳವಣಿಗೆಗೆ ಸಂಬಂಧಿಸಿದದ್ದೇ ಎಂಬುದು ಸದ್ಯ ಚರ್ಚೆಯ ವಿಷಯವಾಗಿದೆ.



