HomeDharwadಸ್ವಾತಂತ್ರ್ಯೋತ್ಸವವನ್ನು ಗೌರವಯುತವಾಗಿ ಆಚರಿಸೋಣ

ಸ್ವಾತಂತ್ರ್ಯೋತ್ಸವವನ್ನು ಗೌರವಯುತವಾಗಿ ಆಚರಿಸೋಣ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಯುವ ಸಮೂಹದಲ್ಲಿ ಸ್ವಾತಂತ್ರ್ಯೋತ್ಸವದ, ದೇಶ ಪ್ರೇಮವನ್ನು ಬೆಳೆಸುವ ಮತ್ತು ಸ್ವಾತಂತ್ರ್ಯ ಘಳಿಗೆಯನ್ನು ಸ್ಮರಿಸುವ ಉದ್ದೇಶದಿಂದ ಅವಳಿ ನಗರದ ವಿವಿಧ ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸ್ವಾಯತ್ತ ವಿಶ್ವವಿದ್ಯಾಲಯಗಳು ತಮ್ಮ ವಿದ್ಯಾರ್ಥಿಗಳ ಮೂಲಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಗಂಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಹಾಗೂ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದ ಭಿತ್ತಿಪತ್ರ, ಕರಪತ್ರ ಬಿಡುಗಡೆ ಮತ್ತು ವಿವಿಧ ಕಾಲೇಜು, ವಿಶ್ವವಿದ್ಯಾಲಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು.

ಸ್ವಾತಂತ್ರ‍್ಯ ದಿನಾಚರಣೆಯು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಲ್ಲ. ಇದು ದೇಶದ ಪ್ರತಿಯೊಬ್ಬ ಪ್ರಜೆಯ ಹೆಮ್ಮೆಯ ಪ್ರತೀಕ. ದೇಶದ ಸ್ವಾತಂತ್ರ‍್ಯಕ್ಕಾಗಿ ಪ್ರಾಣ ಬಿಟ್ಟ ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವ ಈ ಪವಿತ್ರ ದಿನವನ್ನು ಅತ್ಯಂತ ಗೌರವಯುತವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಆಗಸ್ಟ್ 14ರ ಸಂಜೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಸ್ವಾತಂತ್ರ‍್ಯೋತ್ಸವದ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. 79ನೇ ಸ್ವಾತಂತ್ರ‍್ಯೋತ್ಸವದ ಸಾಂಸ್ಕೃತಿಕ ಯುವ ಸಂಭ್ರಮವು ಯುವಕ, ಯುವತಿಯರಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸುವಂತಹ ಕಾರ್ಯಕ್ರಮವಾಗಬೇಕು. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಬೇಕಿದೆ ಎಂದು ಅವರು ತಿಳಿಸಿದರು.

ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸುವ, ಜ್ಞಾನವರ್ಧಕ ಕಾರ್ಯಕ್ರಮಗಳನ್ನೂ ಆಯೋಜಿಸಬೇಕು. ಜಿಲ್ಲೆಯ ಜಾನಪದ ಕಲೆಗಳು, ಸ್ಥಳೀಯ ಪ್ರತಿಭೆಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಇದರಿಂದ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆಯು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಮೂಹ ನೃತ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಸಮೂಹ ದೇಶಭಕ್ತಿ ಗೀತೆ, ಸ್ವಾತಂತ್ರ್ಯ ಹೋರಾಟಗಾರರ ಕುರಿತ ರೂಪಕ ಮತ್ತು ಇತರೆ ಹಾಸ್ಯಮಯ ಪ್ರದರ್ಶನಗಳು ಈ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಇರಲಿವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ವಿವಿಧ ವಿಶ್ವವಿದ್ಯಾಲಯಗಳ, ಮಹಾವಿದ್ಯಾಲಯಗಳ ಮುಖ್ಯಸ್ಥರು, ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

ಧ್ವಜಾರೋಹಣ

ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ‍್ಯ ದಿನೋತ್ಸವದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸಬೇಕು. ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಆಯೋಜಿಸಬೇಕು. ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮಕ್ಕಳಿಂದ ಏರ್ಪಡಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!