ದೇಶದ ಅಭಿವೃದ್ಧಿಗೆ ಆದ್ಯತೆ ನೀಡೋಣ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷೆö್ಮÃಶ್ವರ: ಪಟ್ಟಣದ ಪುರಸಭೆಯ ಆವರಣದಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಪುರಸಭೆ ಅಧ್ಯಕ್ಷೆ ಯಲ್ಲಮ್ಮ ದುರಗಣ್ಣವರ ನೆರವೇರಿಸಿದರು.

Advertisement

ಬಳಿಕ ಮಾತನಾಡಿದ ಅವರು, ಪರಸ್ಪರ ಸಮಾನತೆ, ಸಹಬಾಳ್ವೆ, ಜಾತ್ಯಾತೀತತೆ, ಧರ್ಮ, ಸತ್ಯ, ನ್ಯಾಯ ಮತ್ತು ಸೌಹಾರ್ದತೆಯು ನಮ್ಮ ದೇಶದ ಸಂಕೇತವಾಗಿದೆ. ಎಲ್ಲರೂ ದೇಶದ ಅಭಿವೃದ್ಧಿಗೆ ಆದ್ಯತೆ ನೀಡುವದು ಅವಶ್ಯವಾಗಿದೆ ಎಂದು ಹೇಳಿದರು.

ಹಿರಿಯ ಸದಸ್ಯರಾದ ರಾಜಣ್ಣ ಕುಂಬಿ, ಅಶ್ವಿನಿ ಅಂಕಲಕೋಟಿ, ಪ್ರವೀಣ ಬಾಳಿಕಾಯಿ, ಎಸ್.ಕೆ. ಹವಾಲ್ದಾರ ಸಾಂದರ್ಭಿಕವಾಗಿ ಮಾತನಾಡಿದರು.

ಮುಖ್ಯಾಧಿಕಾರಿ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಮಾತನಾಡಿ, ದೇಶದ ಸ್ವಾತಂತ್ರö್ಯ, ಅಭಿವೃದ್ಧಿ, ರಕ್ಷಣೆಗಾಗಿ ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದ್ದಾರೆ. ಸುಂದರ ಸಮಾಜ ನಿರ್ಮಾಣಕ್ಕೆ ಯುವ ಜನಾಂಗ ದುಶ್ಚಟಗಳಿಂದ ದೂರವಿದ್ದು ಸ್ವಚ್ಛ, ಸುಂದರ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದರು.

ಪುರಸಭೆಯ ಸದಸ್ಯರು, ಸಿಬ್ಬಂದಿ, ಪುರಸಭೆ ಅಂಗ ಸಂಸ್ಥೆಗಳಾದ ಉಮಾ ವಿದ್ಯಾಲಯ, ಪುರಸಭೆ ಪ.ಪೂ ಕಾಲೇಜು, ಪುರಸಭೆ ಪದವಿ ಕಲಾ ಮಹಾವಿದ್ಯಾಲಯಗಳ ಮುಖ್ಯೋಪಾಧ್ಯಾಯರು, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here