ವಿಜಯಪುರ:- ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರು ವಕ್ಫ್ ಬೋರ್ಡ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನ ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ.
ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ ಎಂದು ಪತ್ರದಲ್ಲಿ ಶಾಸಕರು ಉಲ್ಲೇಖಿಸಿದ್ದಾರೆ.



