ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ

0
Let's remember the freedom fighters
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಅ.23ರಂದು ತಾಲೂಕಿನ ಎಲ್ಲ ಸರಕಾರಿ, ಅರೆ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ 11ಕ್ಕೆ ಕಡ್ಡಾಯವಾಗಿ ಸ್ವಾತಂತ್ರ್ಯ ಹೋರಾಟಗರ್ತಿ ವೀರರಾಣಿ ಕಿತ್ತೂರ ಚನ್ನಮ್ಮನ ಜಯಂತಿಯನ್ನು ಆಚರಿಸಬೇಕೆಂದು ತಹಸೀಲ್ದಾರ ವಾಸುದೇವ ಎಂ.ಸ್ವಾಮಿ ಹೇಳಿದರು.

Advertisement

ಅವರು ತಹಸೀಲ್ದಾರ ಕಾರ್ಯಾಲಯದಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಿತ್ತೂರ ರಾಣಿ ಚನ್ನಮ್ಮ ಸ್ವತಂತ್ರ ಭಾರತದ ಹೋರಾಟಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ವೀರ ವನಿತೆಯ ಸಂಸ್ಮರಣೆಗಾಗಿ ಪ್ರತಿವರ್ಷ ಅ.10ರಂದು ಕಿತ್ತೂರ ಚನ್ನಮ್ಮನ ಜಯಂತ್ಯುತ್ಸವವನ್ನು ಆಚರಿಸಲಾಗುತ್ತಿದೆ.

ಕಿತ್ತೂರ ಚನ್ನಮ್ಮನಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ಯವುದೇ ಒಂದು ಜಾತಿ, ಜನಾಂಗಕ್ಕೆ ಸೀಮಿತಗೊಳಿಸದೇ ಎಲ್ಲರೂ ಸೇರಿ ಸ್ಮರಿಸುವ ಕಾರ್ಯ ಮಾಡೋಣ. ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ ಎಂದರು.

ಈ ವೇಳೆ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಮಂಜುನಾಥ ಮಾಗಡಿ ಮಾತನಾಡಿ, ಅ.23ರ ನಂತರ ವೀರರಾಣಿ ಕಿತ್ತೂರ ಚನ್ನಮ್ಮನ ಜಯಂತಿಯನ್ನು ವಿಶೇಷವಾಗಿ ಆಚರಿಸುವ ಬಗ್ಗೆ ಚರ್ಚಿಸಲಾಗುವುದು.

ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿನ ಕಿತ್ತೂರ ಚನ್ನಮ್ಮನ ವೃತ್ತವನ್ನು ಅಭಿವೃದ್ಧಿಗೊಳಿಸುವಂತೆ ಒತ್ತಾಯಿಸಿದರು.

ಈ ವೇಳೆ ತಾ.ಪಂ ಇಓ ಕೃಷ್ಣಪ್ಪ ಧರ್ಮರ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಸದಸ್ಯ ಮಹಾದೇವಪ್ಪ ಅಣ್ಣಿಗೇರಿ, ನೀಲಪ್ಪ ಶರಸೂರಿ, ಶಂಕರ ಬ್ಯಾಡಗಿ, ಸುರೇಶ ನಂದೆಣ್ಣವರ ಸೇರಿ ವಿವಿಧ ಸಮಾಜದ ಮುಖಂಡರು, ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳಿದ್ದರು.


Spread the love

LEAVE A REPLY

Please enter your comment!
Please enter your name here