ಬೆಂಗಳೂರು: ಸಂಕ್ರಾಂತಿ ಬಳಿಕ JDS ಪಕ್ಷದಲ್ಲಿ ಎಷ್ಟು ಜನ ಶಾಸಕರು ಉಳಿಯುತ್ತಾರೆ ನೋಡೋಣ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಕುಮಾರಸ್ವಾಮಿ 60 ಪರ್ಸೆಂಟ್ ಲಂಚದ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ಕುಮಾರಸ್ವಾಮಿಯವರಿಗೆ ಮೊನ್ನೆ ನಡೆದ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ.
Advertisement
ಅವರಿಗೆ ಅವರ ಪಕ್ಷದ ಆಸ್ತಿತ್ವಕ್ಕೆ ಧಕ್ಕೆಯಾಗಿದೆ, ಅವರಿಗೆ ಹತಾಶೆ ಶುರುವಾಗಿದೆ. ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ಇದ್ದರೆ ಕೊಡಲಿ, ಸಂಕ್ರಾಂತಿ ಬಳಿಕ ಅವರ ಪಕ್ಷದಲ್ಲಿ ಎಷ್ಟು ಜನ ಶಾಸಕರು ಉಳಿಯುತ್ತಾರೆ ನೋಡೋಣ ಎಂದು ಹೇಳಿಕೆ ನೀಡಿದ್ದಾರೆ.
ಇನ್ನೂ ಮುಂದಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿ, ಚರ್ಚೆ ಬಂದಾಗ ನೋಡೋಣ. ಕ್ಯಾಬಿನೆಟ್ನಲ್ಲಿ ವಿಷಯ ಬರಲಿ. ವಿಷಯ ನೋಡದೇ ಮಾತನಾಡುವುದು ಮೂರ್ಖತನ ಆಗುತ್ತದೆ. ವರದಿ ನೋಡಿದ ಮೇಲೆ ನಾನು ಮಾತಾಡುತ್ತೇನೆ ಎಂದು ಹೇಳಿದರು.