ವಿಜಯಪುರ: ತಮ್ಮ ಸಿಡಿ ಬಿಡುಗಡೆ ಮಾಡುತ್ತೇವೆ ಅಂತ ಬಹಿರಂಗ ಎಚ್ಚರಿಕೆ ನೀಡಿದ್ದ ಜಿಲ್ಲೆಯ ಮುಸ್ಲಿಂ ಮುಖಂಡರೊಬ್ಬರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಯತ್ನಾಳ್, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ. ಖಾದ್ರಿ ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು.
ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ.
ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.