ಬೆಂಗಳೂರು: ಬಿಜೆಪಿಯವರು ಯಾರಾದ್ರು ಒಬ್ಬರು ಹೋಗಿ ಬೂಕರ್ ಪ್ರಶಸ್ತಿ ತರಲಿ ನೋಡೋಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ಬಿಜೆಪಿ ಅವರ ರಾಜಕೀಯ ಅಷ್ಟೇ. ಇವರಿಗೆ ಕೆಲಸ ಇಲ್ಲ.
ರಾಜಕೀಯ ಅಸ್ಥಿತ್ವ ಉಳಿಸಿಕೊಳ್ಳಲು ಹೀಗೆ ಮಾತಾಡ್ತಿದ್ದಾರೆ ಅಷ್ಟೆ. ಬಿಜೆಪಿ ಅವರು ಯಾರಾದ್ರು ಒಬ್ಬರು ಹೋಗಿ ಬೂಕರ್ ಪ್ರಶಸ್ತಿ ತರಲಿ ನೋಡೋಣ ಎಂದು ಸವಾಲು ಹಾಕಿದರು. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅನೇಕ ಕಡೆ ಕೋಮು ಸೌಹಾರ್ದತೆಗೋಸ್ಕರ ಒಟ್ಟಾಗಿ ಕೆಲಸ ಮಾಡ್ತಾರೆ. ಹಿಂದೂಗಳು ದರ್ಗಾಕ್ಕೆ ಹೋಗ್ತಾರೆ.
ಮುಸ್ಲಿಮರು ದೇವಸ್ಥಾನಕ್ಕೆ ಹೋಗ್ತಾರೆ. ತಪ್ಪೇನು? ನಮ್ಮೂರಲ್ಲೂ ಇಂತಹ ಪದ್ಧತಿಗಳು ಈಗಲೂ ಇವೆ. ಎಲ್ಲಾ ದೇವರಿಗೆ ಈ ಬಿಜೆಪಿಯವರು ವಕ್ತಾರರಾಗಿದ್ದಾರೆ. ಇವರು ಮಾತಾಡೋಕೆ ಯಾರು? ಟಿಪ್ಪು, ಹೈದರ್, ಒಡೆಯರ ಕಾಲದಿಂದಲೂ ದಸರಾ ನಡೆದಿತ್ತು ಅಲ್ಲವಾ ಎಂದು ಆಕ್ರೋಶ ಹೊರಹಾಕಿದರು.