ವಿಜಯಸಾಕ್ಷಿ ಸುದಿ, ಲಕ್ಷ್ಮೇಶ್ವರ: ಶಿಕ್ಷಣ ಸಂಸ್ಥೆಗಳಲ್ಲಿ ಅನೇಕ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಕ ಸಂಘಟನೆಗೆ ಬಲಪಡಿಸುವ ಮೂಲಕ ಶಕ್ತಿ ತುಂಬೋಣ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಹುಬ್ಬಳ್ಳಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಹೇಳಿದರು.
ಅವರು ಭಾನುವಾರ ತಾಲೂಕಿನ ಶಿಗ್ಲಿಯ ಜಿಎಸ್‌ಎಸ್ ಹೈಸ್ಕೂಲ್‌ನಲ್ಲಿ ನಡೆದ ಮಾಧ್ಯಮಿಕ ಶಾಲಾ ನೌಕರರ ಸಂಘದ ಸಭೆಯಲ್ಲಿ ಮಾತನಾಡಿದರು.
ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಹತ್ತಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಶಿಕ್ಷಕರು ಸಂಘಟಿತರಾಗಿ ಸರ್ಕಾರದ ಮುಂದೆ ಬೇಡಿಕೆಗಳನ್ನಿಟ್ಟಾಗ ಮಾತ್ರ ಸರ್ಕಾರ ಪರಿಗಣಿಸುತ್ತದೆ. ಶಿಕ್ಷಕರ ಧ್ವನಿಯಾಗಿ ಸಭಾಪತಿಗಳಾದ ಬಸವರಾಜ ಹೊರಟ್ಟಿ ಇರುವುದು ನಮಗೆಲ್ಲ ಬಲ ತಂದಿದೆ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಕೆ. ಲಮಾಣಿ, ಜಿಲ್ಲಾ ಪ್ರ.ಕಾರ್ಯದರ್ಶಿ ಎ.ಎಸ್. ಪಾಟೀಲ, ಕೇಂದ್ರ ಸಮಿತಿ ಸದಸ್ಯ ಡಿ.ಎನ್. ಮರಡ್ಡಿ, ಜಿಲ್ಲಾ ಉಪಾಧ್ಯಕ್ಷ ಬೂದಪ್ಪ ಅಂಗಡಿ, ಭೀಮಪ್ಪ ಯರಗೊಪ್ಪ, ಲಕ್ಷ್ಮೇಶ್ವರ ತಾಲೂಕಾ ಘಟಕದ ಅಧ್ಯಕ್ಷ ಎಲ್.ಎಸ್. ಅರಳಹಳ್ಳಿ, ಕಾರ್ಯದರ್ಶಿ ಗಿರೀಶ ಸುಗುಜಾನವರ, ಶಿರಹಟ್ಟಿ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ. ಬಿಜ್ಜೂರ ಮುಂತಾದವರಿದ್ದರು.