ಒಗ್ಗಟ್ಟಿನಿಂದ ದೇಶ ಉಳಿಸಲು ಮುಂದಾಗಿ: ಪ್ರಮೋದ ಮುತಾಲಿಕ್

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಭಕ್ತ ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಾವಿರಾರು ವರ್ಷಗಳ ಹಿಂದೆಯೇ ಸಮಾಜದಲ್ಲಿ ತಮ್ಮ ವಚನ ಸಾಹಿತ್ಯದ ಮೂಲಕ ಜಾಗೃತಿಯನ್ನು ಮೂಡಿಸಿದ್ದಾರೆ. ಇವರ ವಿಚಾರಧಾರೆಗಳು ಇಂದಿನ ಕಲುಷಿತಗೊಂಡಿರುವ ಸಮಾಜಕ್ಕೆ ಅವಶ್ಯಕವಿದೆ. ಹಾಗೆಯೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಕಿತ್ತೂರು ಚೆನ್ನಮ್ಮ ಅವರ ದೇಶಪ್ರೇಮವನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗಬೇಕಾಗಿದೆ. ಆದ್ದರಿಂದ ಎಲ್ಲ ಹಿಂದೂ ಸಮಾಜಗಳು ಒಗ್ಗಟ್ಟಾಗಿ ದೇಶ ಉಳಿಸಲು ಮುಂದಾಗಬೇಕೆಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಕರೆ ನೀಡಿದರು.

Advertisement

ಅವರು ಶನಿವಾರ (ತಡರಾತ್ರಿ) ಶಿರಹಟ್ಟಿಯ ಶ್ರೀ ಎಫ್.ಎಂ. ಡಬಾಲಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜರುಗಿದ ಗದಗ ಜಿಲ್ಲಾ ವಿವಿಧ ಹಿಂದೂ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ದಾಸ ಶ್ರೇಷ್ಠ ಕನಕದಾಸರ ಮತ್ತು ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತೋತ್ಸವದ ಪ್ರಯುಕ್ತ ಬೃಹತ್ ಹಿಂದೂ ಸಮಾವೇಶದಲ್ಲಿ ಮಾತನಾಡಿದರು.

ಕಳೆದ 100 ವರ್ಷಗಳಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರಾದ್ಯಂತ ಜಾಗೃತಿ ಮೂಡಿಸುತ್ತಿದ್ದರೂ ಸಹ ಹಿಂದೂಗಳು ಇಲ್ಲಿಯವರೆಗೂ ಒಗ್ಗಟ್ಟಾಗಿ ಕಾಣಿಸದೇ ಇರುವುದರಿಂದ ಪೆಹಲ್ಗಾಮ್ ಸೇರಿದಂತೆ ವಿವಿಧ ಕಡೆಗಳಲ್ಲಿ ಮುಸ್ಲಿಂ ಭಯೋತ್ಪಾದಕರು ಅಮಾಯಕ ಹಿಂದೂಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಹಿಂದೂ ದೇವಸ್ಥಾನಗಳ ಮೇಲೆ ಕಲ್ಲೆಸೆತ, ಹಿಂದೂ ದೇವರುಗಳಿಗೆ ಅವಮಾನ ಹೀಗೆ ಹತ್ತು ಹಲವು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗುವುದರ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವು ನಿರಂತರವಾಗಿ ನಡೆಯುತ್ತಿದೆ. ಇದನ್ನು ತಡೆಯುವುದಕ್ಕಾಗಿ ಹಿಂದೂಗಳು ಪಣ ತೊಡುವುದು ಅವಶ್ಯವಿದೆ. ಎಲ್ಲ ಮಹಾಪುರುಷರು ಯಾವುದೇ ಒಂದು ಜಾತಿಗೆ ಸೀಮಿತರಾಗಿರಲಿಲ್ಲ. ನಾನು ಹಿಂದೂ, ನಾನು ಬಂಧು, ನಾ ಒಂದು ಎನ್ನುವ ದೃಢ ಸಂಕಲ್ಪ ಮಾಡಬೇಕು. ಹಿಂದೂಗಳನ್ನು ಕೆಣಕಿದರೆ ನಮ್ಮ ಶಕ್ತಿಯನ್ನು ತೋರಿಸಬೇಕು ಎಂದರು.

ಡಿಜೆ ಹಳ್ಳಿ, ಹುಬ್ಬಳ್ಳಿಯ ಗಲಭೆ, ಪೆಹಲ್ಗಾಮ್‌ನಲ್ಲಿ ನಡೆದ ಘಟನೆ ಹೀಗೆ ಅನೇಕ ಕಡೆಗಳಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿವೆ. ಪೊಲೀಸರ ನೈತಿಕ ಬಲ ಕುಸಿದಿದ್ದರಿಂದ ಎಲ್ಲ ಕಡೆಗಳಲ್ಲಿಯೂ ನೆಮ್ಮದಿಯ ವಾತಾವರಣವಿಲ್ಲ. ಆದ್ದರಿಂದ 2028ಕ್ಕೆ ನಮ್ಮ ಸರಕಾರ ಬಂದರೆ ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಎಲ್ಲರಿಗೂ ಎಕೆ-47 ಗನ್, ಮದರಸಾ ಬಂದ್‌ನಂತಹ ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಆದ್ದರಿಂದ ಎಲ್ಲ ಸಮಾಜದ ಹಿಂದೂಗಳು ಒಗ್ಗಟ್ಟಾಗಿ ದೇಶ ಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕೆಂದು ಹೇಳಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಲ್ಲೂರಿನ ಅಮೋಘಿ ಸಿದ್ದೇಶ್ವರ ಸ್ವಾಮೀಜಿ, ಶ್ರೀರಾಮ ಸೇನೆಯ ರಾಜ್ಯ ಸಂಚಾಲಕ ರಾಜು ಖಾನಪ್ಪನವರ, ಸಂತೋಷ ಕುರಿ, ನಾಗರಾಜ ಲಕ್ಕುಂಡಿ, ಬಸವರಾಜ ಪಲ್ಲೇದ, ರಾಮಣ್ಣ ಕಂಬಳಿ, ಶಂಕರ ಮರಾಠೆ, ಪ್ರವೀಣಗೌಡ ಪಾಟೀಲ, ಶಂಕರ ಭಾವಿ, ಜಾನು ಲಮಾಣಿ, ಆನಂದ ಸ್ವಾಮಿ, ಬಸವರಾಜ ಕಲ್ಯಾಣಿ, ಈರಣ್ಣ ಕೋಟಿ, ದೇವೂ ಪೂಜಾರ, ಮಂಜುನಾಥ ಸೊಂಟನೂರ, ಶಿವಾನಂದ ಬಟ್ಟೂರ ಮುಂತಾದವರು ಉಪಸ್ಥಿತರಿದ್ದರು.

ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ರಾಜ್ಯದ ಜನತೆ ಉತ್ತರ ಪ್ರದೇಶದ ಮಾದರಿಯಲ್ಲೇ ರಾಜ್ಯದಲ್ಲಿ ಆಡಳಿತ ಬರಬೇಕೆನ್ನುವ ನಿರೀಕ್ಷೆಯಲ್ಲಿದ್ದಾರೆ. ಗಾಂಧಿ ಮತ್ತು ನೆಹರು ಮಾಡಿದ ತಪ್ಪಿನಿಂದ ಇಂದು ದೇಶವು ಅನೇಕ ತೊಂದರೆಗಳನ್ನು ಅನುಭವಿಸುತ್ತಿದೆ. ನೇತಾಜಿ ಸುಭಾಸ್‌ಚಂದ್ರ ಬೋಸ್ ಮತ್ತು ಭಗತ್‌ಸಿಂಗ್‌ರಂತಹ ಮಹನೀಯರಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ನೆಹರು ವಕ್ಫ್ ಆಸ್ತಿಗಳ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಿದ್ದರು, ಇದನ್ನು ನರೇಂದ್ರ ಮೋದಿ ಅವರು ತಿದ್ದುಪಡಿ ಮಾಡಿ ದೇಶದ ಆಸ್ತಿಯನ್ನು ರಕ್ಷಣೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here