ದೇಶದ ಭವಿಷ್ಯಕ್ಕಾಗಿ ಒಟ್ಟಾಗಿ ದುಡಿಯೋಣ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ವಿ.ಪಿ. ಗಾಲಾ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

Advertisement

ಪ್ರಾಚಾರ್ಯ ಅಮರಯ್ಯ ಚಿನ್ನಯ್ಯನಮಠ ಮಾತನಾಡಿ, ಸಂವಿಧಾನವು ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕುಗಳು ಮತ್ತು ಸ್ವಾತಂತ್ರ‍್ಯವನ್ನು ನೀಡುತ್ತದೆ. ಗಣರಾಜ್ಯೋತ್ಸವವು ಶಿಕ್ಷಣ, ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯಂತಹ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಆಚರಿಸುತ್ತದೆ. ಎಲ್ಲಾ ಭಾರತೀಯರು ತಮ್ಮ ದೇಶದ ಬಗ್ಗೆ ಹೆಮ್ಮೆ ಪಡುವ ಮತ್ತು ಉತ್ತಮ ಭವಿಷ್ಯಕ್ಕಾಗಿ ಒಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡುವ ಸಮಯ ಇದಾಗಿದೆ ಎಂದರು.

ಕಾಲೇಜಿನ ಅಧ್ಯಕ್ಷೆ ರಚನಾ ಗಾಲಾ, ಸೆಕ್ರೆಟರಿ ಪಂಕಜ್ ಗಾಲಾ, ನಿರ್ದೇಶಕ ಗುಂಜನ ಗಾಲಾ, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here